ಬೆಂಗಳೂರು: ಕೇವಲ ಪ್ರತಿಷ್ಠೆ ಅಧಿಕಾರದಿಂದ ಗೌರವ ಸಿಗುವುದಿಲ್ಲ. ಅದನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆ ತರಬೇಕು; ಆಗ ಗೌರವ ತಾನಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ ತಿಳಿಸಿದರು.
ಈ ವೇಳೆ ಮಾತನಾಡಿದ ಅವರು,
ಗ್ರಾಮ ಪಂಚಾಯತಿ ಸದಸ್ಯರು ಬಹುತೇಕ ನಿರ್ಣಾಯಕ ಮತ್ತು ಸ್ಥಳೀಯ ಶಕ್ತಿ. ಗ್ರಾಮ ಪಂಚಾಯತಿಯು ವಿಧಾನ ಪರಿಷತ್, ವಿಧಾನಸಭೆಗೆ ಹೆಬ್ಬಾಗಿಲು ಇದ್ದಂತೆ. ವಿಧಾನ ಪರಿಷತ್ ಪ್ರವೇಶಿಸಲು ಇಚ್ಛೆ ಇರುವವರೇ ಹೆಚ್ಚಾಗಿ ಗ್ರಾಮ ಪಂಚಾಯತಿಗಳನ್ನು ಪ್ರವೇಶಿಸುತ್ತಿದ್ದಾರೆ. ಎಲ್ಲ ಪಕ್ಷಗಳಲ್ಲೂ ಇಂಥವರಿದ್ದಾರೆ. ಕೇವಲ ನಮ್ಮ ಪಕ್ಷದಲ್ಲಿ ಅಲ್ಲ ಎಂದರು.
ದೇಶದಲ್ಲಿ ಚೆಕ್ ಗೆ ಸಹಿ ಮಾಡುವ ಅಧಿಕಾರವನ್ನು ಕೇವಲ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾತ್ರ ನೀಡಲಾಗಿದೆ. ಬೇರೆ ಯಾವ ಜನಪ್ರತಿನಿಧಿಗಳಿಗೆ ಇಲ್ಲ ಎಂದು ಅವರು ವಿವರಿಸಿದರು.
ಕಾಂಗ್ರೆಸ್ ನಮ್ಮ ಯೋಚನಾ ಶಕ್ತಿಯನ್ನೇ ಹಾಳು ಮಾಡುತ್ತದೆ. ಕಾಂಗ್ರೆಸ್ ಪಕ್ಷದ ಭ್ರಷ್ಟಚಾರ, ಕುಟುಂಬ ರಾಜಕಾರಣ, ಪಕ್ಷಪಾತ ಎಲ್ಲರಿಗೂ ತಿಳಿದಿದೆ. ಅದು ಚುನಾಯಿತ ಪ್ರತಿನಿಧಿಗಳ ಯೋಚನಾ ಶಕ್ತಿಯನ್ನೇ ಹಾಳು ಮಾಡಿ, ಅವರ ದಿಕ್ಸೂಚಿಯನ್ನೇ ಬದಲಾಯಿಸಿದ್ದು ದುರಂತ ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಸದಸ್ಯರ ಅಧಿಕಾರ ಅನ್ನೋದು ಯಾವ ದೆಹಲಿ ನಾಯಕರಿಗೂ ಇಲ್ಲ, ಅಧಿಕಾರ ಅನ್ನೋದೆ ಸೇವೆ ಮಾಡಲಿಕ್ಕೆ, ಒಂದು ಮೈಕ್ ಮೂಲಕ ನೀರು ಬರುವುದನ್ನು ಜನರಿಗೆ ತಿಳಿಸಬಹುದು, ಜನಸಾಮಾನ್ಯರಿಗೆ ಹತ್ತಿರದಿಂದ ಸಮಸ್ಯೆ ನೋಡಲು ಅವಕಾಶ ಸಿಗುತ್ತದೆ. ಅದನ್ನು ಸದುಪಯೋಗ ಪಡಿಸಿಕೊಂಡು ಜನರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಲು ಉತ್ತಮ ವೇದಿಕೆ ಅಗಲಿದೆ, ಅದನ್ನ ಒಳ್ಳೆಯದಕ್ಕೆ ಬಳಸಬೇಕು ಎಂದು ಸಲಹೆ ನೀಡಿದರು.
ಗಾಂಧಿಯವರ ಗ್ರಾಮ ಸ್ವರಾಜ್ಯ ಚಿಂತನೆಯನ್ನು ಪಂಡಿತ್ ದೀನದಯಾಳ್ ಅಂತ್ಯೋದಯ ಎಂದರು, ಸರ್ವೋದಯ ಎಂದರೂ ಅದೇ ಆಗಿದೆ. ಗ್ರಾಮ ಪಂಚಾಯತಿಗಳು ಉತ್ತಮ ಗುಣಮಟ್ಟ ನೀಡಿ ಸಮಾಜದ ಮುಖ್ಯವಾಹಿನಿಗೆ ಜನರನ್ನು ತರುವುದೇ ಎಲ್ಲರ ಉದ್ದೇಶ ಎಂದು ವಿವರಿಸಿದರು.
ಗ್ರಾಮ ಪಂಚಾಯತಿಗಳಲ್ಲಿ ಹೈನುಗಾರಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆಗೆ ಉತ್ತೇಜನ ಕೊಡಬೇಕು. ಸ್ಥಳೀಯ ಉತ್ಪಾದನೆ, ಸ್ಥಳೀಯ ಉತ್ತೇಜನಕ್ಕೆ ಗ್ರಾಮ ಪಂಚಾಯತಿ ಸದಸ್ಯರು ಸ್ವಯಂ ಪ್ರೇರಿತ ನಿರ್ಧಾರಗಳು ಕೈಗೊಳ್ಳಬೇಕು ಎಂದು ತಿಳಿಸಿದರು..
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…