ಚಿತ್ರದುರ್ಗ, ಸೆ.26: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇದೇ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಕಾನೂನು ಅರಿವು ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಚಾರ್ಯ ಪ್ರೊ. ಸಿದ್ರಾಮ ಚನ್ನಗೌಡ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ. ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಗಂಗಾಧರ್ ಭಾಗವಹಿಸುವರು. ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಎ. ಮಂಜುನಾಥ ಸೈಬರ್ ಅಪರಾಧ ಮತ್ತು ಕಾನೂನು ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















