Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಬಿಜೆಪಿ ಸಮಸ್ತ ಕನ್ನಡಿಗರಿಗೂ ಅವಮಾನ ಮಾಡಿದೆ : ಜೆಡಿಎಸ್ ಆಕ್ರೋಶ

Facebook
Twitter
Telegram
WhatsApp

 

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದು ಕೆಂಪೇಗೌಡ ಪ್ರತಿಮೆಯನ್ನು ಉದ್ಘಾಟಿಸಿದ್ದಾರೆ. ಈ ಸಂಬಂಧ ಜೆಡಿಎಸ್ ಆಕ್ರೋಶ ಹೊರ ಹಾಕಿದೆ. ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ @H_D_Devegowda ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ @BJP4Karnataka ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ?.

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.

ರಾಜ್ಯ @BJP4Karnataka ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ @narendramodi ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ಕೆಂಪೇಗೌಡರು @BJP4India ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ.

ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಸರಣಿ ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

error: Content is protected !!