ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 14,473 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 40,417 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 100035 RTPCR ಟೆಸ್ಡ್ ಸೇರಿದಂತೆ ಒಟ್ಟು 140452 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 14,473 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 10,800 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ 1,356 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 5 ಜನ ಸಾವನ್ನಪ್ಪಿದ್ದಾರೆ.
