Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ವಿಶ್ವ ಸ್ಟ್ರೋಕ್ ದಿನ : ಸ್ಟ್ರೋಕ್‍ನ ಲಕ್ಷಣಗಳೇನು ? ಮತ್ತು ತಡೆಗಟ್ಟುವುದು ಹೇಗೆ ? ಇಲ್ಲಿದೆ ಮಹತ್ವದ ಮಾಹಿತಿ

Facebook
Twitter
Telegram
WhatsApp

 

ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29 ರಂದು ವಿಶ್ವ ಸ್ಟ್ರೋಕ್ ದಿವಸ ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತಿ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ ಸಾವಿಗೆ ಅತೀ ಹೃದಯಾಘಾತದ ನಂತರ ಸಾವಿಗೆ ಕಾರಣವಾಗುವ ರೋಗಗಳಲ್ಲಿ ಸ್ಟ್ರೋಕ್ ಎರಡನೇ ಸ್ಥಾನ ಗಳಿಸಿದೆ. ಆದರೆ ಒಂದು ಸಮಾಧಾನಕರ ಅಂಶ ಎಂದರೆ ಹೆಚ್ಚಿನ ಎಲ್ಲಾ ‘ಸ್ಟ್ರೋಕ್’ಗಳನ್ನು ತಡೆಗಟ್ಟಬಹುದಾಗಿದೆ. ಈ ಆಚರಣೆ 2006ರಲ್ಲಿ ಆರಂಭವಾಗಿದ್ದು, ವಿಶ್ವ ಸ್ಟ್ರೋಕ್ ಸಂಸ್ಥೆ ಈ ಆಚರಣೆಯನ್ನು ಜಾರಿಗೆ ತಂದಿದೆ. 2010ರಲ್ಲಿ ‘ಸ್ಟ್ರೋಕ್’ ರೋಗವನ್ನು ಜಾಗತಿಕ ಆರೋಗ್ಯ ತುರ್ತು ಸಮಸ್ಯೆ ಎಂದು ವಿಶ್ವ ಸ್ಟ್ರೋಕ್ ಸಂಸ್ಥೆ ಘೋಷಿಸಿದೆ. ಅಮೇರಿಕಾ ದೇಶವೊಂದರಲ್ಲಿಯೇ ವಾರ್ಷಿಕವಾಗಿ 8 ಲಕ್ಷ ಮಂದಿ ಈ ಸ್ಟ್ರೋಕ್ ರೋಗಕ್ಕೆ ತುತ್ತಾಗುತ್ತಾರೆ. ಇದಲ್ಲದೆ ಈ ಸ್ಟ್ರೋಕ್ ಬಂದ ಬಳಿಕ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದಿದ್ದಲ್ಲಿ ಆ ವ್ಯಕ್ತಿ ಶಾಶ್ವತವಾಗಿ ಅಂಗವೈಕಲ್ಯ ಹೊಂದುತ್ತಾನೆ. ಈ ಕಾರಣದಿಂದಾಗಿ ಶಾಶ್ವತ ಅಂಗವೈಕಲ್ಯ್ಯ ಉಂಟಾಗುವ ಕಾರಣಗಳಲ್ಲಿ ‘ಸ್ಟ್ರೋಕ್’ಗೆ ಮೊದಲ ಸ್ಥಾನ ಅನಾಯಾಸವಾಗಿ ದೊರೆತಿದೆ. ಜಾಗತಿಕವಾಗಿ ಸುಮಾರು 20 ಲಕ್ಷ ಮಂದಿ ವಾರ್ಷಿಕವಾಗಿ ಈ ರೋಗಕ್ಕೆ ತುತ್ತಾಗುತ್ತಾರೆ ಎನ್ನಲಾಗಿದೆ. 2023ರ ಆಚರಣೆಯು ಧ್ಯೇಯ ವಾಕ್ಯ ‘ನಾಲ್ವರಲ್ಲಿ ನೀವೊಬ್ಬರಾಗಬೇಡಿ’ ಎಂಬುದಾಗಿದೆ. ಆಂಗ್ಲ ಭಾಷೆಯಲ್ಲಿ ‘Do not be the one’ ಎಂಬುದಾಗಿದೆ.

ಜಗತ್ತಿನಲ್ಲಿ ಅಂಗವೈಕಲ್ಯಕ್ಕೆ ಕಾರಣವಾಗಿರುವ ಎರಡನೇ ಅತೀ ದೊಡ್ಡ ಕಾರಣ ಎಂದರೆ ಮೆದುಳಿಗೆ ಸಂಬಂಧಪಟ್ಟ ಸ್ಟ್ರೋಕ್ ಅಥವಾ ಮೆದುಳಿನ ಆಘಾತ. ಪ್ರತಿ ವರ್ಷ 15 ಮಿಲಿಯನ್ ಮಂದಿ ಈ ಸ್ಟ್ರೋಕ್ ಖಾಯಿಲೆಗೆ ತುತ್ತಾಗುತ್ತಾರೆ ಇದರ ಮೂರನೇ ಒಂದಂಶನÀಷ್ಟು ಜನ ಸತ್ತರೆ ಇನ್ನುಳಿದ ಮೂರನೇ ಒಂದಂಶದಷ್ಟು ಜನ ಶಾಶ್ವತವಾಗಿ ಅಂಗ ವೈಕಲ್ಯಕಕ್ಕೆ ತುತ್ತಾಗುತ್ತಾರೆ. ಉಳಿದ ಮೂರನೇ ಒಂದಂಶದಷ್ಟು ಜನರಿಗೆ ಮಾತ್ರ ಸೂಕ್ತ ಚಿಕಿತ್ಸೆ ದೊರಕಿ ಮೊದಲಿನಂತಾಗುವ ಸಾಧ್ಯತೆ ಇರುತ್ತದೆ. ಯಾವುದೇ ವಯಸ್ಸಿನಲ್ಲಿ ಈ ಖಾಯಿಲೆ ಕಾಣಸಿಕೊಳ್ಳಬಹುದಾದರೂ, ಸಾಮಾನ್ಯವಾಗಿ 60 ವರ್ಷದ ನಂತರವೇ ಹೆಚ್ಚಾಗಿ ಕಾಣಸಿಗುತ್ತದೆ. ಮೆದುಳಿಗೆ ಯಾವುದಾದರೊಂದು ಭಾಗಕ್ಕೆ ರಕ್ತಸಂಚಾರ ನಿಂತು ಹೋಗಿ ಆ ಭಾಗದ ಮೆದುಳು ನಿರ್ಜೀವವಾಗುತ್ತದೆ ಮತ್ತು ಆ ಭಾಗದಿಂದ ನಿಯಂತ್ರಿಸಲ್ಪಡುವ ಕೆಲಸಗಳು ನಿಷ್ಕ್ರಿಯವಾಗುತ್ತದೆ. ಇದನ್ನೇ ಮೆದುಳಿನ ಆಘಾತ ಅಥಾವ ಸ್ಟ್ರೋಕ್ ಎನ್ನುತ್ತಾರೆ. ಎರಡು ರೀತಿಯ ಸ್ಟ್ರೋಕ್ ಇದ್ದು ಮೆದುಳಿನ ರಕ್ತನಾಳಗಳು ಒಡೆದುಕೊಂಡು ಮೆದುಳಿನ ಜೀವಕೋಶಗಳು ನಿರ್ಜೀವವಾಗುತ್ತದೆ. ಇದನ್ನು ಹಿಮೋರೇಜಿಕ್ ಸ್ಟ್ರೋಕ್ ಎನ್ನುತ್ತಾರೆ. ಇನ್ನೊಂದನ್ನು ಇಷ್ಕೆಮಿಕ್ ಸ್ಟ್ರೋಕ್ ಎನ್ನುತ್ತಾರೆ. ಇದರಲ್ಲಿ ರಕ್ತನಾಳಗಳ ಒಳಗೆ ರಕ್ತಹೆಪ್ಪುಗಟ್ಟಿಕೊಂಡು ರಕ್ತನಾಳಗಳಲ್ಲಿ ರಕ್ತ ಪರಿಚಲನೆಗೆ ಅಡ್ಡಿಯಾಗಿ, ಆ ಭಾಗದ ಮೆದುಳಿನ ಜೀವಕೋಶಗಳು ಸಾಯುತ್ತದೆ. ಇದು ಅತೀ ಸಾಮಾನ್ಯ ಮತ್ತು ಹೆಚ್ಚಾಗಿ ಕಾಣಸಿಗುವ ರೋಗವಾಗಿರುತ್ತದೆ.

ಸ್ಟ್ರೋಕ್ ಯಾರಿಗೆ ಬರಬಹುದು ? :-

12 ಕಾರಣಗಳು

1. ಆಲ್ಕೋಹಾಲ್, ಸಿಗರೇಟ್ ಸೇವನೆ ಮಾದಕದ್ರವ್ಯ ಸೇವನೆ ಇರುವವರಿಗೆ ಸ್ಟ್ರೋಕ್ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.
2. ಮಧುಮೇಹ ರೋಗಿಗಳು.
3. ರಕ್ತದಲ್ಲಿ ಕೊಬ್ಬಿನ ಅಂಶ ಜಾಸ್ತಿ ಇರುವವರಿಗೆ.
4. ಅಧಿಕ ರಕ್ತದೊತ್ತಡ ಇರುವವರಿಗೆ.
5. ವಂಶ ಪಾರಂಪರ್ಯವಾಗಿ ವಂಶವಾಹಿನಿಗಳಲ್ಲಿಯೂ ಬರುವ ಸಾಧ್ಯತೆ ಇರುತ್ತದೆ.
6. ಹೃದಯ ಸಂಬಂಧಿ ಖಾಯಿಲೆಗಳು ಮತ್ತು ಪೆಡಸುಗೊಂಡ ರಕ್ತನಾಳ ಇರುವವರಿಗೆ.
7. ಸ್ಥೂಲಕಾಯ, ಬೊಜ್ಜು ಜಾಸ್ತಿ ಇರುವವರಿಗೆ ಮತ್ತು ವಿಲಾಸಿ ಜೀವನಶೈಲಿ ಇರುವವರಿಗೆ.
8. ದುಡಿಮೆ ಇಲ್ಲದ, ದೈಹಿಕ ಶ್ರಮವಿಲ್ಲದ ಜೀವನಕ್ರಮ.
9. ಅತಿಯಾದ ಮಾನಸಿಕ ಒತ್ತಡ, ಮಾನಸಿಕ ವ್ಯಥೆ ಮತ್ತು ಮಾನಸಿಕ ವ್ಯಾದಿ.
10. ಕುಡುಗೋಲು ಕಣ ಖಾಯಿಲೆ ಇರುವವರಿಗೆ.
11. ಅತಿಯಾದ ನೋವು ನಿವಾರಕಗಳ ಸೇವನೆ (ಬ್ರೂಪೇನ್ ಮಾತ್ರೆ).
12. ಸಮತೋಲನ ಇರುವ ಆಹಾರ ಸೇವನೆ ಮಾಡದಿರುವುದು, ಅತಿಯಾದ ಜಂಕ್ ಆಹಾರ ಸೇವನೆ ಮತ್ತು ಕೊಬ್ಬು ಮತ್ತು ಕರಿದ ಪದಾರ್ಥಗಳ ಸೇವನೆ.

ಸ್ಟ್ರೋಕ್‍ನ ಲಕ್ಷಣಗಳು :

12 ಲಕ್ಷಣಗಳು :-
1. ಮುಖದ ಒಂದು ಭಾಗದಲ್ಲಿ ನೋವು, ಕೈ, ಕಾಲು, ಎದೆ ಭಾಗದಲ್ಲಿ ನೋವು ಇರಬಹುದು.
2. ಕಣ್ಣು ಮಂಜಾಗುವುದು, ವಸ್ತುಗಳು ಎರಡೆರಡಾಗಿ ಕಾಣುವುದು.
3. ಉಸಿರಾಡಲು ಕಷ್ಟವಾಗುವುದು, ನುಂಗಲು ಕಷ್ಟವಾಗುವುದು.
4. ವಾಂತಿ, ವಾಕರಿಕೆ ಬಂದಂತಾಗುವುದು, ತಲೆ ತಿರುಗಿದಂತೆ ಭಾಸವಾಗುವುದು.
5. ಮೈಯಲ್ಲಿ ನಡುಕ.
6. ದೇಹದ ಸಮತೋಲನ ತಪ್ಪುವುದು, ಕೈಕಾಲುಗಳಲ್ಲಿ ಹೊಂದಾಣಿಕೆ ಇಲ್ಲದಿರುವುದು, ಕಣ್ಣು ಕತ್ತಲು ಬರುವುದು.
7. ನಡೆದಾಡಲು ಕಷ್ಟವಾಗುವುದು, ಕೈಕಾಲುಗಳು ಮರಗಟ್ಟಿದಂತೆ ಭಾಸವಾಗಬಹುದು.
8. ಮುಖ ಸೊಟ್ಟಗಾಗುವುದು, ಮುಖದಲ್ಲಿನ ಸ್ನಾಯುಗಳ ಮೇಲಿನ ನಿಯಂತ್ರಣ ತಪ್ಪುತ್ತದೆ. ಒಂದು ಭಾಗದ ಮುಖದಲ್ಲಿ ಸ್ನಾಯುಗಳ ನಿಯಂತ್ರಣ ಕಳೆದುಕೊಂಡು ಸೊಟ್ಟಗಾಗುತ್ತದೆ. ಕೈಕಾಲುಗಳ ನಿಯಂತ್ರಣವೂ ತಪ್ಪುತ್ತದೆ. ಎರಡು ಕೈಗಳನ್ನು ತಲೆಯ ಮೇಲೆ ಎತ್ತಲು ಹೇಳಿದಾಗ ಎರಡು ಕೈಗಳನ್ನು ಎತ್ತಲು ಕಷ್ಟವಾಗಬಹುದು. ಅದೇ ರೀತಿ ನಗಲು ಸಾಧ್ಯವಾಗುವುದಿಲ್ಲ.
9. ತಲೆನೋವು, ಕೆಲವೊಮ್ಮೆ ಕಾರಣವಿಲ್ಲದೆ ಅತಿಯಾದ ತಲೆನೋವು ಬರಬಹುದು.
10. ಏನಾದರೂ ಕೆಲಸದ ಮಧ್ಯದಲ್ಲಿರುವಾಗ ಎಲ್ಲಾ ಆಲೋಚನೆಗಳು ನಿಷ್ಕ್ರಿಯವಾಗಿ ಏನೂ ತೊಚದಂತಾಗುವುದು, ಯೋಚನಾಶಕ್ತಿ ಕಳೆದುಕೊಳ್ಳುವುದು.
11. ಮಾತಾನಾಡಲು ಕಷ್ಟವಾಗುವುದು, ತೊದಲುವುದು ಇತ್ಯಾದಿ.
12. ಅತಿಯಾದ ಸುಸ್ತು ಆಯಾಸ ಮತ್ತು ಭ್ರಾಂತಿಗಳಾಗುವುದು.

ಗುರುತಿಸುವುದು ಹೇಗೆ? :-

FAST ಎಂಬ ಶಬ್ದದ ಮುಖಾಂತರ ಸ್ಟ್ರೋಕ್‍ನ್ನು ಗುರುತಿಸಲಾಗುತ್ತದೆ ಮತ್ತು ತಕ್ಷಣವೇ ಸ್ಪಂದಿಸಲಾಗುತ್ತದೆ.
F (FACE) ಅಂದರೆ ಮುಖದಲ್ಲಿನ ನಗಲು ಸಾಧ್ಯವಾಗದಿರುವುದು.A (ARMS) ಅಂದರೆ ಎರಡೂ ಕೈಗಳನ್ನು ಮೇಲೆತ್ತಲು ಸಾಧ್ಯವಾಗದಿರುವುದು. S (SPEECH) ಅಂದರೆ ಮಾತನಾಡಲು ಕಷ್ಟವಾಗಿ ತೊದಲುವುದು. (TIME) ಕಾಲಹರಣ ಮಾಡದೇ ಕೂಡಲೇ ಆಸ್ಪತ್ರೆಗೆ ಧಾವಿಸಿ. ಜಾಸ್ತಿ ಕಾಲಹರಣ ಮಾಡಿದಷ್ಟೂ ಮೆದುಳಿನ ಅಘಾತದ ತೀವ್ರತೆ ಹೆಚ್ಚುತ್ತದೆ.

ತಡೆಗಟ್ಟುವುದು ಹೇಗೆ?

ಶೇಕಡಾ 80ರಷ್ಟು ಮೆದುಳಿನ ಅಘಾತವನ್ನು ಸಾಕಷ್ಟು ಮುಂಜಾಗೂರುಕತೆ ವಹಿಸಿ ತಡೆಗಟ್ಟಬಹುದು.
1. ಜೀವನ ಶೈಲಿ ಬದಲಾಯಿಸಿ, ಮದ್ಯಪಾನ ಧೂಮಪಾನ ತ್ಯಜಸಬೇಕು ಮಾದಕ ದ್ರವ್ಯವನ್ನು ಬಿಟ್ಟುಬಿಡಿ.
2. ವ್ಯಾಯಾಮ, ದೈಹಿಕ ಕಸರತ್ತು ಇರುವ ಜೀವನಶೈಲಿ ಅಳವಡಿಸಿ, ಸೋಮಾರಿ ಜೀವನಶೈಲಿ ಬಿಡಿ. ವಿಲಾಸಿ ಜೀವನಕ್ರಮಕ್ಕೆ ತಿಲಾಂಜಲಿ ಇಡಬೇಕು.
3. ಕೊಬ್ಬು ರಹಿತ ಆಹಾರ, ಕರಿದ ಪದಾರ್ಥಗಳನ್ನು ತ್ಯಜಿಸಿ ಕಾಳು ಧಾನ್ಯಗಳಿರುವ ಹಸಿ ತರಕಾರಿ, ಹಣ್ಣು ಹಂಪಲು ಜಾಸ್ತಿ ತಿನ್ನಬೇಕು.
4. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬೇಕು.
5. ಅತಿಯಾದ ಬೊಜ್ಜು ಸ್ಥೂಲಕಾಯ ಇರಲೇಬಾರದು.BMI ಅಂದರೆ ದೇಹದ ತೂಕದ ಮಾಪನ 25ಕ್ಕಿಂತ ಕಡಿಮೆ ಇರಬೇಕು.
6. ಮಧುಮೇಹ ನಿಯಂತ್ರಣ ಮಾಡಬೇಕು.
7. ದಿನಕ್ಕೆ ಅರ್ಧ ಘಂಟೆ ಬಿರುಸು ನಡಿಗೆ ಮತ್ತು ದೈಹಿಕ ಕಸರತ್ತು ಮಾಡಬೇಕು.

ಕೊನೆಮಾತು :-

ಮೆದುಳಿನ ಆಘಾತ ಬಹಳ ಸುಲಭವಾಗಿ ಗುರುತಿಸಬಹುದಾದ ಖಾಯಿಲೆ. ಯಾವತ್ತೂ ಮುನ್ಸೂಚನೆ ಇಲ್ಲದೆ ಈ ರೋಗ ಬರುವುದೇ ಇಲ್ಲ. ತಕ್ಷಣವೇ ಗುರುತಿಸಿ ಚಿಕಿತ್ಸೆ ನೀಡಿದಲ್ಲಿ 80% ಮಂದಿಗೆ ಮೊದಲಿನಂತೆ ಜೀವನ ನಡೆಸಬಹುದು. ಅತಿ ಸುಲಭವಾಗಿ ಗುರುತಿಸಬಹುದಾದ ಮತ್ತು ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುವ ರೋಗ ಇದಾಗಿರುವುದರಿಂದ ತಕ್ಷಣವೇ ಗುರುತಿಸಿ ಚಿಕಿತ್ಸೆ ಪಡೆಯುವುದರಲ್ಲಿಯೇ ಜಾಣತನ ಅಡಗಿದೆ. ಸ್ಟ್ರೋಕ್ ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ ಬರಬಹುದು. ಪತ್ರಿ ನಾಲ್ಕರಲ್ಲಿ ಒಬ್ಬರು ಜೀವಮಾನದಲ್ಲಿ ಒಮ್ಮೆ ಸ್ಟ್ರೋಕ್ ಅಥವಾ ಮೆದುಳಿನ ಆಘಾತಕ್ಕೆ ಒಳಗಾಗುತ್ತಾರೆ. ಸ್ಟ್ರೋಕ್ ಬರದಂತೆ ತಡೆಯಲು 8 ಸರಳ ಉಪಾಯಗಳೆಂದರೆ ನಿರಂತರವಾಗಿ ನಿಮ್ಮ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಿ ಹಾಗೂ ನಿಯಂತ್ರಿಸಿಕೊಳ್ಳಿ, ನಿಮ್ಮ ದೇಹದ ಕೊಲೆಸ್ಟ್ರಾಲ್ ಅಂಶವನ್ನು ನಿಯಂತ್ರಿಸಿ, ನಿಮ್ಮ ದೇಹದ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಸಿಕೊಳ್ಳಿ, ದೈಹಿಕ ವ್ಯಾಯಾಮವನ್ನು ನಿರಂತರವಾಗಿ ಮಾಡಿಕೊಳ್ಳಿ, ಸರಿಯಾದ ಸಮತೋಲನ ಆಹಾರ ಸೇವಿಸಿ, ದೇಹದ ತೂಕವನ್ನು ನಿಯಂತ್ರಿಸಿಕೊಳ್ಳಿ, ಧೂಮಪಾನ ವರ್ಜಿಸಿ, ವೈದ್ಯರು ಸೂಚಿಸಿದ ಔಷಧಿಯನ್ನು ಸರಿಯಾದ ಪ್ರಮಾಣದಲ್ಲಿ, ಸೂಕ್ತ ಸಮಯಲ್ಲಿ ಸೇವಿಸಬೇಕು. ಈ ಎಂಟು ಸರಳ ವಿಷಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಖಂಡಿತವಾಗಿಯೂ ಮೆದುಳಿನ ಆಘಾತ ತಡೆಯಲು ಸಾಧ್ಯವಿದೆ.

ಡಾ|| ಮುರಲೀ ಮೋಹನ್ ಚೂಂತಾರು
BDS,MDS,DNB,MOSRCSEd(U.K),FPFA, M.B.A
ಸುರಕ್ಷಾದಂತ ಚಿಕಿತ್ಸಾಲಯ
ಹೊಸಂಗಡಿ – 671 323
mobi : 9845135787

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಗುರುವಾರದ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 21 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ನವಂಬರ್. ,21 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ

ಶಿಗ್ಗಾಂವಿಯಲ್ಲೂ ಬಿಜೆಪಿ ಅಭ್ಯರ್ಥಿಯದ್ದೇ ಗೆಲುವು : ಸಮೀಕ್ಷೆ ವರದಿಯಲ್ಲಿ ಉಲ್ಲೇಖ..!

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಬಸವರಾಜ್ ಬೊಮ್ಮಾಯಿ ಅವರಿಂದ ತೆರವಾದ ಮೇಲೆ‌ ತಮ್ಮ ಮಗನಿಗೆ ಟಿಕೆಟ್ ಪಡೆದಿದ್ದಾರೆ. ಬಿಜೆಪಿಯಿಂದ ಭರತ್ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದೆ. ಇದಕ್ಕೆ ಹಲವರ ವಿರೋಧವೂ ಕೇಳಿ ಬಂದಿತ್ತು. ಒಂದಷ್ಟು ಕಾರ್ಯಕರ್ತರು

ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು ಗೊತ್ತಾ..? ಸಮೀಕ್ಷೆಯೊಂದು ಕೊಟ್ಟ ವರದಿ ಏನು..?

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಕಟಣೆಗೆ ಇನ್ನೊಂದು ದಿನವಷ್ಟೇ ಬಾಕಿ ಇದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರ ಸಾಕಷ್ಟು ಹೈವೋಲ್ಟೇಜ್ ಕಣವಾಗಿತ್ತು. ಡಿಕೆ ಬ್ರದರ್ಸ್ ಗೆ ಈ ಕ್ಷೇತ್ರ

error: Content is protected !!