Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದೇ ಮುರುಘಾಶ್ರೀಗಳಿಗೆ ಸಿಗುತ್ತಾ ಬಿಡುಗಡೆ ಭಾಗ್ಯ..?

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ನವಂಬರ್.10 : ಮುರುಘಾಮಠದ ಡಾ. ಶಿವಮೂರ್ತಿ ಮುರುಘಾಶರಣರು ಇಂದೇ ಬಿಡುಗಡೆಯಾಗುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ.

ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ ಒಂದು ಪ್ರಕರಣಕ್ಕೆ ಬುಧವಾರ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಆದರೆ ಇನ್ನು ಬಿಡುಗಡೆಯಾಗಿಲ್ಲ. ಏಳು ಷರತ್ತುಗಳೊಂದಿಗೆ ಜಾಮೀನು ನೀಡಲಾಗಿತ್ತು. ಇದರ ನಡುವೆ ಪೋಕ್ಸೊ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಇನ್ನು ಜಾಮೀನು ಸಿಕ್ಕಿಲ್ಲ.

ಇಂದು ಮುರುಘಾ ಶರಣರ ಪರ ವಕೀಲರು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ  ಹೈಕೋರ್ಟ್ ಜಾಮೀನು ನೀಡಿರುವ ಅರ್ಜಿಯನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಹೀಗಾಗಿ ಇಂದು ಬಹುತೇಕ ಬಿಡುಗಡೆಯಾಗುತ್ತಾರೆಂಬ ಎಂದು ಕುತೂಹಲ ಎಲ್ಲರಲ್ಲೂ ಇದೆ.

ಮುರುಘಾ ಶ್ರೀಗಳಿಗೆ ಈಗಾಗಲೇ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಏಳು ಷರತ್ತುಗಳೊಂದಿಗೆ ಜಾಮೀನು ಸಿಕ್ಕಿದ್ದು, ಅದರಲ್ಲಿ ಚಿತ್ರದುರ್ಗಕ್ಕೆ ಭೇಟಿ ನೀಡುವಂತಿಲ್ಲ ಎಂದು ಷರತ್ತು ವಿಧಿಸಿದೆ. ಅದರ ಜೊತೆಗೆ ಇನ್ನೊಬ್ಬರು ಸಾಕ್ಷಿಯನ್ನು ಹಾಕಬೇಕಾಗಿದೆ. ಈಗ ಪೋಕ್ಸೊ ಕಾಯಿದೆಯಡಿ ದಾಖಲಾದ ಪ್ರಕರಣಕ್ಕೂ ಜಾಮೀನು ಸಿಗುತ್ತಾ..? ಅಥವಾ ಈಗ ಸಿಕ್ಕಿರುವ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಾ ಎಂದು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!