Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು, ನಾಳೆ ಸಿಎಂ ಡಿ.ಕೆ.ಶಿವಕುಮಾರ್ ಚಿತ್ರದುರ್ಗ ಜಿಲ್ಲಾ ಪ್ರವಾಸ : ಬರ ವೀಕ್ಷಣೆ

---Advertisement---

ಚಿತ್ರದುರ್ಗ.ಜು.25: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 25 ಹಾಗೂ 26 ರ ಎರಡು ದಿನ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.

ಜುಲೈ 25 ಇಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 10 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್ಗೆ ಆಗಮಿಸುವರು.ನಂತರ ರಸ್ತೆಯ ಮೂಲಕ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದಾರೆ.

ಬಳಿಕ ಮಧ್ಯಾಹ್ನ 12:30ಕ್ಕೆ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸುವರು.ಸಂಜೆ 05 ಗಂಟೆಗೆ ಮುರುಘಾಮಠ ಆವರಣದ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವರು.

ಜುಲೈ 26 ಭಾನುವಾರ ಬೆಳಿಗ್ಗೆ 09:50ಕ್ಕೆ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಆಯೋಜಿಸಿರುವ “ಕಾರ್ಗಿಲ್ ವಿಜಯ ದಿವಸ್” ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಬೆಳಿಗ್ಗೆ 10:30 ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 11:30 ಗಂಟೆಗೆ ಹಿರಿಯೂರು ಪಟ್ಟಣದ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್ಗೆ ಆಗಮಿಸುವರು.

ತದನಂತರ ಹಿರಿಯೂರಿನ ನೆಹರೂ ಮೈದಾನದಲ್ಲಿ ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ಭಾವಪೂರ್ಣ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 03 ಗಂಟಗೆ ಹಿರಿಯೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.

Join WhatsApp

Join Now

Join Telegram

Join Now