Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ : ಮಾಜಿ ಸಿಎಂ ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ @DKShivakumar ಅವರ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ.

ಅವರಿಗೆ ಗೊತ್ತಿರಲಿ, 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ.

ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದು ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ. ಇದರಲ್ಲಿ ಕಾಂಗ್ರೆಸ್ ಪಾತ್ರ ಶೂನ್ಯ.

ನಾನು ಪಂಡಿತ್ ನೆಹರು, ಲಾಲ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ.

ಸಂವಿಧಾನ ಕೊಟ್ಟವರು, ದೇಶದ ಮೊದಲನೇ ಸಂಪುಟದಲ್ಲಿ ಸಚಿವರಾಗಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಅವರು. ಅಂಥ ಮಹನೀಯರನ್ನು ಸಂಸತ್ತಿಗೇ ಮತ್ತೆ ಬಾರದಂತೆ ತಡೆದು, ಭಾರತದ ದೀನದಲಿತರ ದನಿಯನ್ನು ನಿರ್ದಯವಾಗಿ ಅಡಗಿಸಿದ ಪಕ್ಷದ ನಾಯಕರು ಇವತ್ತು ಸ್ವಾತಂತ್ಯದ ಭಜನೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು. ಡಿ.ಕೆ.ಶಿವಕುಮಾರ್ ಅವರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಅಲ್ಲದೆ, ಪಕ್ಷದಲ್ಲಿ ನಿಮ್ಮ ಸ್ವಾತಂತ್ರ್ಯಹರಣ ಮಾಡುತ್ತಿರುವವರ ಕಡೆ ಗಮನ ಹರಿಸಿ.

ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ? ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಎಂದು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಳೆ ಬೆಲೆ ಭಾರೀ ಕುಸಿತ : ಬೆಳೆಗಾರ ಕಂಗಾಲು..!

    ರೈತ ಸಾಲ ಸೋಲ ಮಾಡಿ, ಕಷ್ಟಪಟ್ಟು ವ್ಯವಸಾಯ ಮಾಡುತ್ತಾನೆ. ಬೆಳೆದ ಬೆಲೆಗೆ ಬೆಂಬಲ ಸಿಕ್ಕರೆ ಖುಷಿಯಾಗುತ್ತಾನೆ. ಸಾಲ ತೀರಿಸಿ ಮತ್ತೆ ಭೂಮಿ ಹದ ಮಾಡುವತ್ತ ಗಮನ ಹರಿಸುತ್ತಾನೆ. ಆದರೆ ಬೆಳೆದ ಬೆಲೆಗೆ

ನವೋದಯ ವಿದ್ಯಾಲಯ: 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಚಿತ್ರದುರ್ಗ. ನ.25: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ

ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಮಹತ್ವದ ಸೂಚನೆ : ಈ ಕೆಲಸಕ್ಕೆ ಹಣ ಕೇಳಿದರೆ ದೂರು ನೀಡಿ

  ಚಿತ್ರದುರ್ಗ. ನ.25: ವಿಫಲವಾದ  ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ

error: Content is protected !!