ಚಿತ್ರದುರ್ಗ : ಜಿಲ್ಲೆಯಲ್ಲಿ ಕರೋನ ವೈರಸ್ ವರದಿಗೆ ಸಂಬಂಧಿಸಿದಂತೆ ಬುಧವಾರ
5 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 14,893ಕ್ಕೆ ಏರಿಕೆಯಾಗಿದೆ.
6 ಜನರು ಗುಣಮುಖರಾಗಿದ್ದು, 1483 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಸದ್ಯ 46 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ 1,20,512 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.


