ಚಿನ್ನದ ದರದಲ್ಲಿ ಇಂದು ಏರಿಕೆ : ಮಾರುಕಟ್ಟೆಯ ದರದ ಮಾಹಿತಿ ಇಲ್ಲಿದೆ

suddionenews
1 Min Read

ಬೆಂಗಳೂರು: ಇಂದು ಚಿನ್ನ ಬೆಳ್ಳಿ ಎರಡರಲ್ಲೂ ಏರಿಕೆಯಾಗಿದೆ. ಒಂದು ಗ್ರಾಂಗೆ ಸುಮಾರು 10 ರೂಪಾಯಿಯಷ್ಟು 22 ಕದಯಾರೆಟ್ ಚಿನ್ನದ ದರ ಏರಿಕೆಯಾಗಿದ್ದು, ಈ ಮೂಲಕ ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,055 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ 8,787 ರೂಪಾಯಿ ಇದೆ. 22 ಕ್ಯಾರಟ್ ಹತ್ತು ಗ್ರಾಂಗೆ 80,550 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,870 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 80,550 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,700 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 77,720 ರೂಪಾಯಿ ಇದೆ. ಅಮೆರಿಕಾದಲ್ಲಿ 77,590 ಇದೆ. ಸೌದಿಯಲ್ಲಿ 77,440 ಇದೆ.

 

ಇನ್ನು ಬೆಳ್ಳಿ ಬೆಲೆಯಲ್ಲಿ ಬಹಳ ದಿನಗಳ ಬಳಿಕ ಏರಿಕೆಯಾಗಿದೆ. ಗ್ರಾಂಗೆ 50 ಪೈಸೆಯಷ್ಟು ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 101 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,100 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,100 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,800 ರೂಪಾಯಿ ಇದೆ.

Share This Article
Leave a Comment

Leave a Reply

Your email address will not be published. Required fields are marked *