Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿರಾಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದನ್ನು ಇಂದಿನ ಯುವಪೀಳಿಗೆಗೆ ತಿಳಿಸಬೇಕು : ಎಂ.ಕೆ.ತಾಜ್‍ಪೀರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಚಿತ್ರದುರ್ಗ, (ಅ.31): ಪುರುಷರಷ್ಟೆ ಮಹಿಳೆಯರು ಮುಂದಿದ್ದಾರೆ ಎನ್ನುವುದನ್ನು ಇಡಿ ಜಗತ್ತಿಗೆ ತೋರಿಸಿಕೊಟ್ಟವರು ಇಂದಿರಾಗಾಂಧಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಹೇಳಿದರು.

ಇಂದಿರಾ ಪುಣ್ಯತಿಥಿಯ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇಂದಿರಾಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪ್ರಜಾಪ್ರಭುತ್ವದ ದೊಡ್ಡ ರಾಷ್ಟ್ರ ಭಾರತದಲ್ಲಿ ಮೊದಲ ಮಹಿಳಾ ಪ್ರಧಾನಿಯಾಗಿ ಮೂರು ಅವಧಿಗೆ ಅಧಿಕಾರ ನಡೆಸಿದ ಇಂದಿರಾಗಾಂಧಿ ಮಹಿಳೆಯರೂ ಅಧಿಕಾರ ನಡೆಸಬಹುದು ಎನ್ನುವುದನ್ನು ತೋರಿಸಿದ್ದಾರೆ.

ಮೈಸೂರಿಗೆ ಕರ್ನಾಟಕ ಎಂದು ನಾಮಕರಣ ಮಾಡಿದ್ದು, ಕಾಂಗ್ರೆಸ್‍ನ ಡಿ.ದೇವರಾಜಅರಸು ಕನ್ನಡ ರಾಜ್ಯೋತ್ಸವವನ್ನು ನಾವುಗಳೆ ಹೆಚ್ಚು ವಿಜೃಂಭಣೆಯಿಂದ ಆಚರಿಸಬೇಕು. ಬಡವರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದ ಇಂದಿರಾಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದನ್ನು ಇಂದಿನ ಯುವಪೀಳಿಗೆಗೆ ತಿಳಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಿ.ಎಸ್.ಕುಮಾರ್‌ ಗೌಡ ಮಾತನಾಡಿ ಭಾರತದ ಪ್ರಥಮ ಮಹಿಳಾ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಹೇರಿ ದೇಶವನ್ನು ಉಳಿಸಿದ್ದಾರೆ. ಬಡವರು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿ ತಂದರು. ಡ್ಯಾಂ ಕಟ್ಟಿಸಿ ಕೈಗಾರಿಕೆಗಳಿಗೆ ಉತ್ತೇಜಿಸಿದರು. ಖಾದಿ ಗ್ರಾಮೋದ್ಯೋಗ ಮಂಡಳಿಯನ್ನು ಹುಟ್ಟುಹಾಕಿದ್ದು, ಇಂದಿರಾಗಾಂಧಿ. ಬಿಜೆಪಿ, ಆರ್.ಎಸ್.ಎಸ್.ನವರು ಯಾವ ಮುಖ ಇಟ್ಟುಕೊಂಡು ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಾರೆಂದು ಪ್ರಶ್ನಿಸಿದರು.?
ಗ್ರಹಗಳ ಮೇಲೆ ಹೋಗುವಂತೆ ಮಾಡಿದ್ದು, ಇಂದಿರಾಗಾಂಧಿ, ವಿಜ್ಞಾನ ತಂತ್ರಜ್ಞಾನ ಮುಂದುವರೆಯಲು ಕಾಂಗ್ರೆಸ್ ಕೊಡುಗೆ ಕಾರಣ.

ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಐತಿಹಾಸಿಕ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಂಡಿದ್ದರ ಫಲವಾಗಿ ಇಂದು ದೇಶದಲ್ಲಿ ಅನೇಕ ಬದಲಾವಣೆಗಳಾಗಿವೆ. ಜಾತಿ, ಧರ್ಮಗಳ ಬಗ್ಗೆ ಒಡಕು ಮೂಡಿಸುತ್ತಿರುವ ಕೋಮುವಾದಿಗಳಿಗೆ ಇಂದಿರಾ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಕಾಂಗ್ರೆಸ್ ದೇಶಕ್ಕೆ ನೀಡಿರುವ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಕೆಲಸವಾಗಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡುತ್ತ ಮಹಿಳಾ ಸಬಲೀಕರಣಕ್ಕಾಗಿ ಇಂದಿರಾಗಾಂಧಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಟ್ಟಿದ್ದಾರೆ. ಗಾಂಧಿ ಕುಟುಂಬದ ತತ್ವ ಸಿದ್ದಾಂತಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಬೇಕಿದೆ. ಗರೀಭಿ ಹಠಾವೋ, ಉಳುವವನೆ ಭೂಮಿಯ ಒಡೆಯ, ಬ್ಯಾಂಕ್‍ಗಳನ್ನು ರಾಷ್ಟ್ರೀಕರಣಗೊಳಿಸಿ ಇಡಿ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಕೀರ್ತಿ ಇಂದಿರಾಗಾಂಧಿಗೆ ಸಲ್ಲಬೇಕು. ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಸೈನ್ಸ್, ಡಿ.ಆರ್.ಡಿ.ಓ.ಇವುಗಳೆಲ್ಲಾ ಕಾಂಗ್ರೆಸ್ ಕೊಡುಗೆ. ಬಿಜೆಪಿ.ಯವರು ಕಾಂಗ್ರೆಸ್‍ನ ಯೋಜನೆಗಳನ್ನು ರಿನೀವಲ್ ಮಾಡಿ ದೇಶದ ಜನರ ಗಮನ ತಮ್ಮತ್ತ ಸೆಳೆದುಕೊಳ್ಳುತ್ತಿರುವುದನ್ನು ಬಿಟ್ಟರೆ ಸಾಧನೆ ಮಾತ್ರ ಶೂನ್ಯ ಎನ್ನುವುದನ್ನು ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಲ್ಲಿ ವಿನಂತಿಸಿದರು.

ವಿಧಾನಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್ ಮಾತನಾಡಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಎನ್ನುವುದನ್ನು ಯಾರು ಮರೆಯಬಾರದು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ.ಯನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಿನಿಂದಲೆ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ ಮಾತನಾಡುತ್ತ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದ ಇಂದಿರಾಗಾಂಧಿ ನಾರಿಗೆ ಶಕ್ತಿ ತುಂಬಿದ್ದಾರೆ. ದೇಶದ ಪ್ರಧಾನಿಯಾಗಿದ್ದಾಗ ನೀಡಿದ ಜನಪರ ಯೋಜನೆಗಳನ್ನು ಮಹಿಳೆಯರು ಧೈರ್ಯವಾಗಿ ಜನರ ಬಳಿ ಹೇಳಿಕೊಳ್ಳುವುದಕ್ಕೆ ಮುಜುಗರಪಡುವುದು ಬೇಡ.

ರಾಜಕೀಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಿ. ಇಂದಿರಾಗಾಂಧಿ, ರಾಜೀವ್‍ಗಾಂಧಿ, ಸೋನಿಯಾ, ರಾಹುಲ್‍ಗಾಂಧಿರವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಮಹಿಳೆಯರಲ್ಲಿ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಚಳ್ಳಕೆರೆ ನಗರಸಭೆ ಮಾಜಿ ಅಧ್ಯಕ್ಷೆ ಷಂಶಾದ್‍ಭಾನು, ಸರಸ್ವತಿ ಇವರುಗಳು ಮಾತನಾಡಿದರು.

ಶ್ರೀಮತಿ ರುದ್ರಾಣಿ ಗಂಗಾಧರ್, ಮುದಸಿರ್ ನವಾಜ್, ಸೈಯದ್ ಖುದ್ದೂಸ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಸಿ.ನಿರಂಜನಮೂರ್ತಿ, ಮೋಹನ್‍ಪೂಜಾರಿ, ಪ್ರಕಾಶ್‍ನಾಯ್ಕ,  ಸೇರಿದಂತೆ ಅನೇಕ ಮಹಿಳೆಯರು ಇಂದಿರಾ ಪುಣ್ಯತಿಥಿಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

ಕೇವಲ ಗಂಟು ಮಾಡಿಕೊಳ್ಳುಲು ಶಾಸಕರಾಗಿದ್ದರೆಯೇ ವಿನಃ ಅಭಿವೃದ್ದಿಗಾಗಿ ಅಲ್ಲ : ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆರೋಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 05 : ಮೊಳಕಾಲ್ಮೂರು ಕ್ಷೇತ್ರದಲ್ಲಿ ‌ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.

error: Content is protected !!