ಪುನೀತ್ ಕುಟುಂಬಸ್ಥರನ್ನ ಭೇಟಿ ಮಾಡಿ ಸಾಂತ್ವನ ಹೇಳಿದ ಟಾಲಿವುಡ್ ನಟ ರಾಮ್ ಚರಣ್

ಬೆಂಗಳೂರು: ಅಪ್ಪು ನಿಧನರಾಗಿ ಇಂದಿಗೆ 6 ದಿನ. ಪುನೀತ್ ರನ್ನು ಕಳೆದುಕೊಂಡ ಕುಟುಂಬ ಭಾರೀ ದುಃಖದಲ್ಲಿದೆ. ಆ ನೋವನ್ನ ಮರೆಸೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಪುನೀತ್ ಮನೆಗೆ ಬೇರೆ ಬೇರೆ ಭಾಷೆಯ ನಟರು ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ. ಇದೀಗ ಟಾಲಿವುಡ್ ನಟ, ಚಿರಂಜೀವಿ ಪುತ್ರ ರಾಮ್ ಚರಣ್ ಭೇಟಿ ನೀಡಿ, ಸಾಂತ್ವನ ತಿಳಿಸಿದ್ದಾರೆ.

ಸದಾಶಿವನಗರದಲ್ಲಿರುವ ಪುನೀತ್ ರಾಜ್‍ಕುಮಾರ್ ಮನೆಗೆ ಭೇಟಿ ಕೊಟ್ಟ ನಟ ರಾಮ್ ಚರಣ್, ಅಪ್ಪು ಪತ್ನಿ ಅಶ್ವಿನಿ ಹಾಗೂ ಮಕ್ಕಳಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾತನಾಡಿದ ರಾಮ್ ಚರಣದ, ಪುನೀತ್ ರಾಜ್‍ಕುಮಾರ್ ನಿಧನ ಅತಿ ದೊಡ್ಡ ನಷ್ಟ. ನಮ್ಮ ಕುಟುಂಬ ಸದಸ್ಯನನ್ನೇ ಕಳೆದುಕೊಂಡಷ್ಟು ನೋವಾಗುತ್ತಿದೆ ಎಂದಿದ್ದಾರೆ.

ಮಾನವೀಯ ಮೌಲ್ಯಗಳನ್ನ ಅವರಿಂದ ಕಲಿಯಬೇಕು. ನಮ್ಮ ಮನೆಗೆ ಬಂದಾಗ ಬಹಳ ಆತ್ಮೀಯವಾಗಿರುತ್ತಿದ್ದರು. ನಾವೇ ಗೆಸ್ಟ್ ಅನ್ನೋ ಥರ ಎಲ್ಲರ ಜೊತೆ ಖುಷಿ ಖುಷಿಯಾಗಿರ್ತಾ ಇದ್ದರು. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ರಾಜ್‍ಕುಮಾರ್ ಕುಟುಂಬ ನಮ್ಮನ್ನು ಎಲ್ಲಾ ಕಾರ್ಯಕ್ರಮಕ್ಕೂ ಆಹ್ವಾನ ನೀಡ್ತಾ ಇತ್ತು. ಪುನೀತ್ ನಿಧನ ತೀರಾ ಅನ್ಯಾಯ. ಒಪ್ಪಿಕೊಳ್ಳೋದಕ್ಕೆ ಆಗ್ತಾ ಇಲ್ಲ.

ಬೆಂಗಳೂರಿಗೆ ಯಾವಾಗ ಬಂದರೂ ಅವರನ್ನ ಭೇಟಿಯಾಗಿ ಹೋಗ್ತಿದ್ದೆ. ರಾಜ್‍ಕುಮಾರ್ ಮನೆಗೆ ಬರ್ತಿದ್ದೆ. ಇತ್ತೀಚೆಗೆ ಕೂಡ ಶಿವಣ್ಣ, ಪುನೀತ್ ರನ್ನ ಭೇಟಿಯಾಗಿದ್ದೆ. ಪುನೀತ್ ತುಂಬ ವಿನಯವಂತ. ವಿ ಆಲ್ ಮಿಸ್ ಯೂ ಪುನೀತ್ ರಾಜ್‍ಕುಮಾರ್ ಎಂದು ನಟ ರಾಮ್ ಚರಣ್ ಭಾವುಕರಾಗಿದ್ದಾರೆ.

suddionenews

Recent Posts

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…

37 minutes ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

2 hours ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

5 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

6 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

15 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

15 hours ago