ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.01 : ಸದಾನಂದಯ್ಯ ಬಡಾವಣೆ, ಹದಿನಾರನೇ ವಾರ್ಡ್ ಎಂ.ಕೆ.ಪ್ಯಾಲೇಸ್ ಹಿಂಭಾಗ, ರೈಲ್ವೆ ಸ್ಟೇಷನ್ ಹತ್ತಿರ ತ್ರಿಶೂಲಾಂಜನೇಯಸ್ವಾಮಿ ದೇವಸ್ಥಾನ ಲೋಕಾರ್ಪಣೆ, ನವಗ್ರಹ ಮತ್ತು ನಾಗದೇವರ ಮೂರ್ತಿಗಳ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಡಿ.1 ರಿಂದ 3 ರವರೆಗೆ ನಡೆಯಲಿದೆ.
2 ರ ಇಂದು ಆಂಜನೇಯಸ್ವಾಮಿ ಪ್ರತಿಷ್ಠಾಪನೆ. ಇಸ್ಕಾನ್ ಚಿತ್ರದುರ್ಗ ವತಿಯಿಂದ ಹರಿನಾಮ ಸಂಕೀರ್ತನೆ, ಬೆಳಿಗ್ಗೆ 9 ಕ್ಕೆ ನೂತನ ದೇವಸ್ಥಾನ ಉದ್ಘಾಟನೆ. ಪ್ರಸನ್ನಾನಂದ ವಾಲ್ಮೀಕಿ ಸ್ವಾಮಿಗಳು, ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು ದಿವ್ಯಸಾನಿಧ್ಯ ವಹಿಸಲಿದ್ದು, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿಯುವ ಮುಖಂಡ ಸಿದ್ದಾರ್ಥ ಗುಂಡಾರ್ಪಿ, ಭೀಮಸಮುದ್ರದ ಜಿ.ಎಸ್.ಅನಿತ್‍ಕುಮಾರ್, ಎಂ.ಸಿ.ರಘುಚಂದನ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಟಿ.ಸುರೇಶ್, ನಗರಸಭಾ ಸದಸ್ಯ ವೆಂಕಟೇಶ್, ತ್ರಿಶೂಲಾಂಜನೇಯಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷ ಬಿ.ಲಿಂಗಯ್ಯ ಇವರುಗಳು ಆಗಮಿಸಲಿದ್ದಾರೆ.
ಸಂಜೆ ನಾಲ್ಕು ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












