Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸೆಂಬರ್ 16 ರಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಡೆಸ್ಟಿನಿ 2023ರ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.15 :  ನಗರದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಡಿಯಲ್ಲಿ ಪ್ರತಿವರ್ಷವೂ ಆಯೋಜಿಸುವ “ಡೆಸ್ಟಿನಿ” – ಬೃಹತ್ ಸಾಂಸ್ಕøತಿಕ ಹಬ್ಬವನ್ನು ನಾಳೆ ಡಿಸೆಂಬರ್ 16 ರಂದು ಆಯೋಜಿಸಲಾಗಿದೆ.

“ವಿಜ್ಞಾನ ವಸ್ತುಪ್ರದರ್ಶನ”ವನ್ನು ಚಳ್ಳಕೆರೆ ಸಮೀಪವಿರುವ ಕುದಾಪುರದ ಡಿ.ಆರ್.ಡಿ.ಓ ಸಂಸ್ಥೆಯ ವಿಜ್ಞಾನಿಗಳಾಗಿರುವ ಡಾ. ಆರ್ ಮಹೇಶ್‍ಬಾಬು ಹಾಗೂ ಡಾ. ಸಲೀಂ ಸಾಜಿದ್‍ರವರು ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಾಸಕ ಎಂ.ಚಂದ್ರಪ್ಪ,  ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ, ಕಾರ್ಯನಿರ್ವಹಣಾಧಿಕಾರಿಗಳಾದ ಎಂ.ಸಿ.ರಘುಚಂದನ್ ಹಾಗೂ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಿಜ್ಞಾನ ವಸ್ತುಪ್ರದರ್ಶನವು ಅಂತರ್-ಶಾಲಾ ಹಾಗೂ ಅಂತರ್-ಕಾಲೇಜು ಸ್ಪರ್ಧೆಯಾಗಿದ್ದು, ಮೂರು ಹಂತಗಳಲ್ಲಿ ಆಯೋಜನೆಯಾಗಿದೆ. ಮೊದಲನೇ ಹಂತದಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಎರಡನೇ ಹಂತದಲ್ಲಿ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು ಹಾಗೂ ಮೂರನೇ ಹಂತದಲ್ಲಿ ಪದವಿಪೂರ್ವ ಹಂತದ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಗಿದೆ. ಚಿತ್ರದುರ್ಗ ನಗರದ ವಿವಿಧ ಶಾಲಾ ಕಾಲೇಜುಗಳಿಂದ ಒಟ್ಟು 182 ವಿವಿಧ ವಿಜ್ಞಾನ ಮಾದರಿಗಳು ಮತ್ತು ಪರಿಕಲ್ಪನೆಗಳನ್ನು ಪ್ರದರ್ಶನಗೊಳ್ಳುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment