Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗ ಮತ್ತು ದಾವಣಗೆರೆಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ

---Advertisement---

 

ಸುದ್ದಿಒನ್, ಚಿತ್ರದುರ್ಗ ಫೆ. 08 : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆ. 09 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಗಂಟೆಗೆ ಬೆಂಗಳೂರಿನಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕು ಬ್ರಹ್ಮವಿದ್ಯಾನಗರ ಸುಕ್ಷೇತ್ರ ಆವರಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.

ನಂತರ ಇಲ್ಲಿನ ಭಗೀರಥ ಪೀಠ ಮಹಾಸಂಸ್ಥಾನ ಮಠದ ವತಿಯಿಂದ ಆಯೋಜಿಸಿರುವ ಜಗದ್ಗುರು ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ 25 ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಹಾಗೂ ರಾಷ್ಟ್ರೀಯ ಭಗೀರಥ ಜಯಂತ್ಯೋತ್ಸವ ಮತ್ತು ಉಪ್ಪಾರರ ಬೃಹತ್ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 01 ಗಂಟೆಗೆ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...