ನಾಳೆ ಡಾ. ಕೆ. ವಿ. ಸಂತೋಷ್ ಅವರ “ಚಿತ್ರದುರ್ಗ ತಾಲ್ಲೂಕು ದರ್ಶನ” ಪುಸ್ತಕ ಬಿಡುಗಡೆ

1 Min Read

ಸುದ್ದಿಒನ್, ಚಿತ್ರದುರ್ಗ, ಜುಲೈ.31 : ನಗರದ ಖ್ಯಾತ ವೈದ್ಯ ಡಾ. ಕೆ. ವಿ. ಸಂತೋಷ್ ಅವರು ರಚಿಸಿರುವ “ಚಿತ್ರದುರ್ಗ ತಾಲ್ಲೂಕು ದರ್ಶನ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕದ ಪದಗ್ರಹಣ ಸಮಾರಂಭ ಆಗಸ್ಟ್ 01 ರ ಇಂದು ಬೆಳಿಗ್ಗೆ 30 ಕ್ಕೆ ಪತ್ರಕರ್ತರ ಭವನದಲ್ಲಿ ನಡೆಯಲಿದೆ.

ಹೊಸದುರ್ಗ ಬ್ರಹ್ಮವಿದ್ಯಾನಗರ ಭಗೀರಥ ಪೀಠದ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರು ಹಾಗೂ ಸದಸ್ಯರು ಐ.ಸಿ.ಸಿ.ಆರ್ ಭಾರತ ಸರ್ಕಾರ ಡಾ.ಜನಪದ ಎಸ್.ಬಾಲಾಜಿ ಇವರು ಸಮಾರಂಭ ಉದ್ಘಾಟಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಚಿತ್ರದುರ್ಗ ತಾಲ್ಲೂಕು ದರ್ಶನ ಪುಸ್ತಕ ಬಿಡುಗಡೆಗೊಳಿಸುವರು. ಲೇಖಕರು ಹಾಗೂ ದಂತ ವೈದ್ಯ ಡಾ.ಕೆ.ವಿ.ಸಂತೋಷ್, ಚಿಕ್ಕಮಗಳೂರು ಕ.ಸಾ.ಪ. ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಇವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಕನ್ನಡ ಜನಪದ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷ ಡಾ.ಬಾ.ಮೈಲಾರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆಂದು ಕನ್ನಡ ಜಾನಪದ ಪರಿಷತ್ ಕಾರ್ಯದರ್ಶಿ ಹುರುಳಿ ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *