ಚಿತ್ರದುರ್ಗ ಫೆ. 17 : ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಫೆ. 18 ರಂದು ಚಿತ್ರದುರ್ಗ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವ ಜಾರ್ಜ್ ಅವರು ಅಂದು ಮಧ್ಯಾಹ್ನ ದಾವಣಗೆರೆಯಿಂದ ಹೊರಟು ಮಧ್ಯಾಹ್ನ 2.30 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು. ಬಳಿಕ ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂಧನ ಇಲಾಖೆಯ ವಿಷಯಗಳ ಕುರಿತು ಜಿಲ್ಲೆಯ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುವರು. ಸಭೆಯ ನಂತರ ಪತ್ರಿಕಾಗೋಷ್ಠಿ ಕೈಗೊಳ್ಳುವರು. ಸಚಿವರು ಅದೇ ದಿನ ಸಂಜೆ 5.30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


