ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಜು. 17 : ನಗರದ ಹೊರ ವಲಯದ ಭೋವಿ ಗುರುಪೀಠದಲ್ಲಿ ಜು. 18ರ ಶುಕ್ರವಾರ ನಡೆಯಲಿರುವ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ವಸಂತೋತ್ಸವದ ನಿಮಿತ್ತ ಪ್ರತಿಭಾ ಪುರಸ್ಕಾರ, ವಧೂ-ವರರ ಸಮಾವೇಶ, ರಕ್ತದಾನ ಶಿಬಿರಕ್ಕೆ ಸಕಲ ಸಿದ್ದತೆಯನ್ನು ಮಾಡಲಾಗಿದೆ.
ಕರ್ನಾಟಕ ರಾಜ್ಯವಲ್ಲದೆ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದಲೂ ಸಹಾ ಭಕ್ತಾಧಿಗಳು ಆಗಮಿಸಲಿದ್ದಾರೆ, ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸಹಾ ಭೋವಿ ಸಮಾಜದ ಭಾಂಧವರು ಇಂದು ರಾತ್ರಿಯಿಂದಲೇ ಮಠಕ್ಕೆ ಆಗಮಿಸಲಿದ್ದಾರೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭಕ್ತಾಧಿಗಳು ಆಸನವಾಗಲು ಸುಮಾರು 5 ಸಾವಿರ ಕುರ್ಚಿಗಳನ್ನು ಹಾಕಲಾಗಿದೆ. ಮುಖ್ಯ ಅತಿಥಿಗಳು ಹಾಸನವಾಗಲು ಆಗಲವಾದ ವೇದಿಕೆಯನ್ನು ಸಹಾ ಸಿದ್ದ ಪಡಿಸಲಾಗಿದೆ. ಈಗ ಮಳೆಗಾಲವಾಗಿರುವುದರಿಂದ ಮಳೆ ಬಂದು ಕಾರ್ಯಕ್ರಮ ಹಾಳಾಗಬಾಗರೆಂದು ಮಳೆಯಲ್ಲಿ ಸೋರದ ಜರ್ಮನ್ ಚಪ್ಪರವನ್ನು ಹಾಕಿಸಲಾಗಿದೆ.
ಈ ಸಂಧರ್ಭದಲ್ಲಿ ಮಾತನಾಡಿದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರು ಇಂದಿನ ದಿನಮಾನದಲ್ಲಿ ಮಕ್ಕಳಿಗೆ ಶಿಕ್ಷಣದ ಕಡೆಗೆ ಹೆಚ್ಚಿನ ಒಲವನ್ನು ಸೆಳೆಯುವ ಸಲುವಾಗಿ ಈ ಕಾರ್ಯಕ್ರಮದಲ್ಲಿ ಎಸ್.ಎಸ್. ಎಲ್.ಸಿಯಿಂದ ಹಿಡಿದು ಪದವಿ ಪಡೆದ ಸಂಶೋಧನಯನ್ನು ಮಾಡಿದವರನ್ನು ಈ ಸಮಯದಲ್ಲಿ ಸನ್ಮಾನಿಸ ಲಾಗುವುದು, ಇದ್ದಲ್ಲದೆ ಭೋವಿ ಸಮುದಾಯದಲ್ಲಿ ಮದುವೆಯ ವಯಸ್ಸು ಮೀರುತ್ತಿದೆ ಇದನ್ನು ಮನಗಂಡು ಈ ಕಾರ್ಯಕ್ರಮದಲ್ಲಿ ಮಧು-ವರರ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇಲ್ಲಿ ಭೋವಿ ಸಮುದಾ ಯದವರು ತಮ್ಮ ಮಕ್ಕಳಿಗೆ ಗಂಡು, ಹೆಣ್ಣನ್ನು ನೋಡಿಕೊಳ್ಳಬಹುದಾಗಿದೆ. ಇದಕ್ಕೆ ಅವಕಾಶವನ್ನು ಕಲ್ಪಿಸಲಾ ಗಿದೆ. ಇದರೊಂದಿಗೆ ಉಚಿತವಾದ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು ಇಲ್ಲಿಗೆ ಆಗಮಿಸಿದ ಭಕ್ತಾಧಿ ಗಳು ತಮ್ಮ ಆರೋಗ್ಯದ ಕಾಳಜಿಯನ್ನುವಹಿಸಿ ತಪಾಸಣೆಯನ್ನು ಮಾಡಿಸಿಕೊಳ್ಳ ಬಹುದಾಗಿದೆ.
ಶ್ರೀ ಮಠ ಬಹು ದಿನಗಳಿಂದ ರಕ್ತದಾನದ ಶಿಬಿರಗಳನ್ನು ಮಾಡುತ್ತಾ ಬಂದಿದೆ ಇದುವರೆವಿಗೂ ಶೀಮಠದ ಆಶ್ರಯದಲ್ಲಿ 10 ಸಾವಿರ ಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಗಿದೆ. ಈ ಭಾರಿಯೂ ಸಹಾ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜು. 18 ರಂದು ಬೆಳಿಗ್ಗೆ ಯಿಂದ ಸಂಜೆಯವರೆಗೂ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದೆ. ಮುಂಜಾನೆ ರಾಜ್ಯದ ವಿವಿಧ ಮಠಾಧೀಶರಿಂದ ಧಾರ್ಮಿಕ ಸಭೆ ನಡೆಯಲಿದೆ. ಇದರಲ್ಲಿ ಸಮುದಾಯ ಆಗು ಹೋಗುಗಳ ಬಗ್ಗೆ ಚರ್ಚೆ ನಡೆಯಲಿದೆ. ಇದಾದ ಮೇಲೆ, ಮಾಯಾವಿ ಹಾಗೂ ಹೆಚ್ಚೆಮ್ಮ ಚಲನಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ ಇದಾದ ಮೇಲೆ ಭೋವಿ ಸಮುದಾಯದ ಜಾಗೃತ ಸಭೆ ನಡೆಯಲಿದ್ದು, ನಂತರ ವಧು-ವರರ ಸಮಾವೇಶ, ಪ್ರತಿಭಾ ಪುರಸ್ಕಾರ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ದಾಸೋಹದ ವ್ಯವಸ್ಥೆಯನ್ನು ಮಾಡಲಾಗಿದೆ ಇದಕ್ಕಾಗಿ 25 ಕೌಂಟರ್‍ಗಳನ್ನು ತೆರೆಯಲಾಗಿದೆ, ಭಕ್ತಾಧಿಗಳು ಹೊಟ್ಟೆ ತುಂಬುವಂತ ಆಹಾರವನ್ನು ನೀಡಲಾಗುವುದು.
ಜು. 17 ರ ರಾತ್ರಿ ಬಂದು ತಂಗುವವರಿಗೆ ಶ್ರೀಮಠ ಹಾಗೂ ಮುರುಘಾ ಮಠದಲ್ಲಿ ವ್ಯವಸ್ಥೆಯನ್ನು ಮಾಡಲಾಗಿದೆ, ಜು. 18ರ ಬೆಳಿಗ್ಗೆ ತಿಂಡಿ ಮಧ್ಯಾಹ್ನ ಊಟ, ರಾತ್ರಿ ಸ್ಯಾಕ್ಸ್‍ನ್ನು ನೀಡಲಾಗುವುದು,
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ವಿಧಾನಪರಿಷತ್ತಿನ ವಿರೋಧ ಪಕ್ಷದ ಉಪನಾಯಕರಾದ ಸುನೀಲ್ ವಲ್ಯಾಪುರ, ಹೊಳಲ್ಕೆರೆ ಶಾಸಕರಾದ ಡಾ.ಎಂ.ಚಂದ್ರಪ್ಪ, ಬೆಂಗಳೂರಿನ ಸಿ.ವಿ.ರಾಮನ್ ನಗರದ ಶಾಸಕ ಎಸ್.ರಘು, ಲಿಂಗಸೂರು ಶಾಸಕರಾದ ಮಾನಪ್ಪ ವಜ್ಜಲ್, ಬೆಂಗಳೂರು ಪುಲಿಕೇಶಿ ನಗರ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡ ಶಾಸಕ ವೆಂಕಟೇಶ್ ವಿ., ಬೆಂಗಳೂರು ಮಹದೇವಪುರ ಕ್ಷೇತ್ರದ ಶಾಸಕ ಶ್ರೀಮತಿ ಮಂಜುಳಾ ಲಿಂಬಾವಳಿ, ಕೋಲಾರ ಸಂಸದ ಮಲ್ಲೇಶ್‍ಬಾಬು, ಎಂ.ಎಲ್.ಸಿ.ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯುವ ಜನ ಪ್ರಾಧಿಕಾರದ ಅಧ್ಯಕ್ಷರಾದ ವಿ.ಶಾಂತಕುಮಾರ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಓ.ಸಿ.ಸಿ.ಐ. ರಾಷ್ಟ್ರೀಯ ಅಧ್ಯಕ್ಷಾದ ಹೆಚ್.ರವಿ ಮಾಕಳಿ, ರಾಜ್ಯಾಧ್ಯಕ್ಷರಾದ ಹೆಚ್.ಆನಂದಪ್ಪ, ಮಾಜಿ ಸಚಿವರಾದ ವೆಂಕಟರಮಣಪ್ಪ, ಗೂಳಿಹಟ್ಟಿ ಡಿ.ಶೇಖರ್, ಮಾಜಿ ಸಂಸದ ಜನಾರ್ಧನಸ್ವಾಮಿ, ಮಾಜಿ ಶಾಸಕರಾದ ಬಂಗಾರಪೇಟೆಯ ನಾರಾಯಣಸ್ವಾಮಿ, ನೆಲಮಂಗಲ ಎಂ.ವಿ.ನಾಗರಾಜು, ಲಿಂಗಸೂರಿನ ಡಿ.ಎಸ್.ಹಲಗೇರಿ, ಬೆಂಗಳೂರು ಪುಲಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಬೆಳಗಾವಿ ಬಾಳಾಸಾಹೇಬವಡ್ಡರ, ಭೋವಿ ನಿಗಮದ ಮಾಜಿ ಅಧ್ಯಕ್ಷಾರದ ಜಿ.ವಿ.ಸೀತಾರಾಮ್, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ನಿವೃತ್ತ ಐ.ಎ.ಎಸ್. ಅಧಿಕಾರಿಗಳಾದ ಮಂಜುನಾಥ ಪ್ರಸಾದ್, ಎಸ್.ಎಲ್.ಗಂಗಾಧರಪ್ಪ, ಭೀಮಯ್ಯ ಭಾಗವಹಿಸಲಿದ್ದಾರೆ.
ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಶ್ರೀ ಭೋವಿ ಗುರುಪೀಠದ ಕಾರ್ಯ ನಿರ್ವಹಣಾಧಿಕಾರಿಗಳಾದ ಗೌನಹಳ್ಳಿ ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

















