ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 14 : ಲಲಿತ ಕಲಾ ಅಕಾಡೆಮಿ ಹಾಗೂ ಚಿತ್ರ ಕಲಾವಿದರ ಬಳಗದಿಂದ ಏ.15ರಂದು ವಿಶ್ವಕಲಾ ದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕೋಟೆ ಮುಂಭಾಗದ ಮಯೂರ ಯಾತ್ರಿ ನಿವಾಸದ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ಲಲಿತಕಲಾ ಅಕಾಡೆಮಿ ಸದಸ್ಯ ಸಿ.ಕಣ್ಮೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಚಿತ್ರ ಕಲಾವಿದ ದಾದಾಪೀರ್ ಭಾಗವಹಿಸಲಿದ್ದಾರೆ ಎಂದು ಬಳಗದ ಪ್ರಕಟಣೆ ತಿಳಿಸಿದೆ.


