ಬೆಂಗಳೂರು: ಮುಂದಿನ ಚುನಾವಣೆಗೆ ಸಿದ್ಧತೆಯೂ ಸೇರಿದಂತೆ ಪಕ್ಷವನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಸಲುವಾಗಿ ನಾಳೆಯಿಂದ ಒಂದು ವಾರದ ಕಾಲ ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ ‘ಜನತಾ ಸಂಗಮ’ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕಾರ್ಯಾಗಾರ ಜೆ.ಪಿ.ಭವನದಲ್ಲಿ ನಡೆಯಲಿದ್ದು, ಹೆಚ್.ಡಿ.ದೇವೇಗೌಡರು, ಹೆಚ್.ಕೆ.ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಸೇರಿದಂತೆ ಅನೇಕ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಮುಖ್ಯವಾಗಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ದಿನ ಒಂದಕ್ಕೆ ಎರಡು ಜಿಲ್ಲೆಗಳನ್ನು ಒಳಗೊಂಡಂತೆ ಸಭೆಗಳನ್ನು ನಡೆಸಲಾಗುವುದು. ಈ ಸಭೆಯಲ್ಲಿ ಮುಂದಿನ ಚುನಾವಣಾ ಸಿದ್ಧತೆ ಸಂಬಂಧ ಚರ್ಚಿಸಲಿದ್ದೇವೆ. ಮೊದಲ ದಿನ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಹಾಗೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿಗಳು ಹಾಗೂ ಮುಖಂಡರು, ಕಾರ್ಯಕರ್ತರ ನಡುವೆ ಸಮನ್ವಯತೆ ಸಾಧಿಸುವುದು ಈ ಕಾರ್ಯಾಗಾರದ ಬಹುಮುಖ್ಯ ಉದ್ದೇಶವಾಗಿದೆ ಎಂದು ಅವರು ಮಾಹಿತಿ ನೀಡಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…