Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಬೆಂಗಳೂರು ವಿವಿಯ ಶಿಕ್ಷಣ ವಿಭಾಗದಿಂದ ಮಾತೆ ‘ಸಾವಿತ್ರಿ ಬಾಯಿ ಫುಲೆ’ರವರ ಜಯಂತಿ ಆಚರಣೆ

---Advertisement---

 

ಬೆಂಗಳೂರು: ಜ.02: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಶಿಕ್ಷಣ ವಿಭಾಗದಿಂದ ಹಮ್ಮಿಕೊಂಡಿರುವ ಮಾತೆ ‘ಸಾವಿತ್ರಿ ಬಾಯಿ ಫುಲೆ’ ಅವರ 195ನೇ ಜಯಂತಿಯನ್ನು ಶನಿವಾರ ಬೆಳಗ್ಗೆ 10.30ಕ್ಕೆ ಶಿಕ್ಷಣ ವಿಭಾಗದ ಆಡಿಟೋರಿಯಂನಲ್ಲಿ ಆಚರಿಸಲಾಗುತ್ತದೆಂದು ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದರವರು ತಿಳಿಸಿದ್ದಾರೆ.

ಇದೇ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬೆಂವಿವಿಯ ವಿದ್ಯುನ್ಮಾನ ವಿಭಾಗದ ಪ್ರಾಧ್ಯಾಪಕರಾದ ಡಾ.ವಾಹಿನಿ ಅರವಿಂದ್, ಶಿಕ್ಷಣ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಎಂ.ಸಿ. ಎರ್ರಿಸ್ವಾಮಿರವರು, ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾರ್ಥಿಗಳು, ಪ್ರಥಮ ಮತ್ತು ದ್ವಿತೀಯ ವರ್ಷದ ಎಂ.ಇಡಿ ಪ್ರಶಿಕ್ಷಾಣಾರ್ಥಿಗಳು, ಮಾತೆ ಸಾವಿತ್ರಿ ಬಾಯಿ ಫುಲೆರವರ ಅಭಿಮಾನಿಗಳು ಭಾಗವಹಿಸಲಿದ್ದಾರೆಂದು ಶಿಕ್ಷಣ ವಿಭಾಗದ ಸಂಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...