ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 18 : ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ. ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಸದರಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನಾಳೆ (ಸೆಪ್ಟೆಂಬರ್.19) ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.
ವಿದ್ಯುತ್ ಆಡಚಣೆ ಯಾಗುವ ಪ್ರದೇಶಗಳು :
ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ ಎಂದು ಬೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















