Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಮುಂದೆ ಪೊಲೀಸರೇ ಸೈಲೆಂಟ್ : ಕಾಂಗ್ರೆಸ್

Facebook
Twitter
Telegram
WhatsApp

 

ಬೆಂಗಳೂರು: ಮಾಜಿ ರೌಡಿ ಸೈಲೆಂಟ್ ಸುನಿ ಆಕ್ಟೀವ್ ಆಗಿದ್ದು, ಚುನಾವಣರಗೆ ಚಾಮರಾಜಪೇಟೆಯಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಇದೀಗ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ, ಆಕ್ರೋಶ ಹೊರ ಹಾಕಿದೆ.

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! @JnanendraAraga ಅವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ. ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು?ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?

@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

ಹಿರಿಯೂರು | ವಿಜೃಂಭಣೆಯಿಂದ ಜರುಗಿದ ಶ್ರೀ ಕಣಿವೆ ಮಾರಮ್ಮನ ರಥೋತ್ಸವ

ಸುದ್ದಿಒನ್, ಹಿರಿಯೂರು, ಮೇ. 10  : ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮನ ಬ್ರಹ್ಮ ರಥೋತ್ಸವ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಅಲಂಕರಿಸಿದ ರಥದಲ್ಲಿ ಉತ್ಸವಮೂರ್ತಿಯನ್ನು ಮೆರವಣಿಗೆಯೊಂದಿಗೆ

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.  

error: Content is protected !!