ನವದೆಹಲಿ: ಇಂದು ನೂತನ ಸಂಸತ್ ಭವನ ಉದ್ಘಾಟನೆಗೊಂಡಿದೆ. ಈ ವೇಳೆ ಸಂಸತ್ ಭವನದ ಹೊರಗೆ ಕುಸ್ತಿ ಪಟುಗಳು ಪ್ರತಿಭಟನೆ ನಡೆಸಿದ್ದಾರೆ. ಆದ್ರೆ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯನ್ನು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಖಂಡಿಸಿದ್ದಾರೆ.
ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಆರೋಪ ಕೇಳಿ ಬಂದಿತ್ತು. ಅವರ ವಿರುದ್ಧ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದಯ ಮಹಿಳಾ ಸಮ್ಮಾನ್ ಮಹಾಪಂಚಾಯತ್ ಗೆ ಕರೆ ನೀಡಿದ್ದರು. ಹೀಗಾಗಿ ಇಂದು ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲಾಗಿತ್ತು.
ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ. “ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸರು ಈ ರೀತಿ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ. ಚಾಂಪಿಯನ್ ಗಳನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ಖಂಡನೀಯ” ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ಪ್ರತಿಕ್ರಿಯೆ ನೀಡಿ, ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘಿಸೊದ್ದಕ್ಕಾಗಿ ಕುಸ್ತಿಪಟುಗಳನ್ನು ವಶಕ್ಕೆ ಪಡೆಯಲಾಗಿದೆ. ಇಚಾರಣೆ ನಡೆಸಿದ ಬಳಿಕ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.