ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಕೆಲವು ಜಿಲ್ಲೆಗಳಲಗಲಿ ಜನ ಜೀವನ ಅಸ್ಯವ್ಯಸ್ತವಾಗಿದೆ. ಸಂಪರ್ಕ ಕಲ್ಪಿಸುವ ರಸ್ತೆಗಳು ಜಲಾವೃತಗೊಂಡಿವೆ. ಬಿಟ್ಟು ಬಿಡದೆ ಮಳೆ ಸುರಿಯುತ್ತಲೆ ಇದೆ. ರಾಜ್ಯದ ಮಳೆ ಬಗ್ಗೆ ಸಿಎಂ ಬೊಮ್ಮಾಯಿ ಪರಿಶೀಲಿಸುತ್ತೇನೆ ಎಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ, ಕಳೆದ 10 ದಿವಸಗಳಿಂದ ರಾಜ್ಯದ ಕೆಲವಡೆ ಮಳೆಯಾಗುತ್ತಿದೆ. ಈಗಾಗಲೇ ಡಿಸಿಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾಳೆ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ರಾಜ್ಯದ ಮಳೆಯ ಪರಿಸ್ಥಿತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.
ಕೊಡಗು ಮಂಗಳೂರು ದಕ್ಷಿಣ ಕನ್ನಡ ಕಾರವಾರ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಅಲ್ಲೇ ಸಭೆ ಮಾಡಿ ಪರಿಹಾರಗಳ ಬಗ್ಗೆ ತಿಳಿಸುತ್ತೇನೆ. ಅಲ್ಲಿನ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ ಅಲ್ಲೇ ಸೂಚನೆಗಳನ್ನ ನೀಡ್ತೇನೆ. ನಾಳೆ ಕೊಡಗು ಮತ್ತು ಮಂಗಳೂರು ಭೇಟಿ ಕೊಟ್ಟು, ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡ್ತೀನಿ. ನಾಡಿದ್ದು ಕಾರವಾರ ಜಿಲ್ಲೆಗೆ ಭೇಟಿ ನೀಡಲಿದ್ದೃನೆ ಎಂದಿದ್ದಾರೆ ಸಿಎಂ ಬೊಮ್ಮಾಯಿ.