ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಇಂದು ಮತ ಏಣಿಕೆ ಕಾರ್ಯ ಆರಂಭವಾಗಿದೆ. ಬೆಳಗ್ಗೆಯೇ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ 39 ಸ್ಥಾನ, ಬಿಜೆಪಿ 26 ಸ್ಥಾನ, ಆಪ್ 0, ಇತರೆ 3 ಸ್ಥಾನಗಳನ್ನು ಪಡೆದುಕೊಂಡಿದೆ.
ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಕ್ಷೇತ್ರಗಳಿವೆ. ಬಹುಮತಕ್ಕೆ 35 ಸ್ಥಾನಗಳ ಅಗತ್ಯವಿದೆ. ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಈ ಬೆನ್ನಲ್ಲೆ ಆಪರೇಷನ್ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್ ಗೆ ಕರೆಸಿಕೊಂಡಿದೆ.
ಹಿಮಾಚಲ ಪ್ರದೇಶದಲ್ಲಿ ಪ್ರತಿ ಬಾರಿಯೂ ಸರ್ಕಾರ ಬದಲಾಗುತ್ತಾ ಇರುತ್ತದೆ. ಕಳೆದ ಬಾರಿ ಅಂದರೆ 2017ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನ ಗಳಿಸುವ ಮೂಲಕ ಅಧಿಕಾರದ ಗದ್ದುಗೆ ಏರಿತ್ತು. ಈ ಬಾರಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿರುವುದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ.