ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ತರಲು ಒತ್ತಾಯಿಸಿ ಸರ್ಕಾರಿ ನೌಕರರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಭೆಗಳ ಮೇಲೆ ಸಭೆ ನಡೆಸಿದ ಬಳಿಕ ಇದೀಗ ಸಿಎಂ ಬೊಮ್ಮಾಯಿ ಅವರು ಮಣಿದಿದ್ದಾರೆ. ಸಂಬಳ ಹೆಚ್ಚಳ ಮಾಡಲು ಒಪ್ಪಿದ್ದಾರೆ.
ನೌಕರರ ಜೊತೆಗೆ ಸರಣಿ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಇದೀಗ 17% ರಷ್ಟು ಸಂಬಳ ಜಾಸ್ತಿ ಮಾಡಲು ಒಪ್ಪಿದ್ದಾರೆ. ಉಳಿದಂತೆ NPS ಬೇಡಿಕೆ ಪರಾಮರ್ಶೆ ಮಾಡ್ತೇವೆ. ACS ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ NPS ಯಾವ ರೀತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸುತ್ತೇವೆ ಎಂದಿದ್ದಾರೆ.
ಕೆಲಸ ಹೋದರೂ ಸರಿ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ನೌಕರರ ಅಧ್ಯಕ್ಷ ಷಡಕ್ಷರಿ ಹೇಳಿದ್ದರು. ಇದಾದ ಬಳಿಕ ಸಿಎಂ ಬೊಮ್ಮಾಯಿ ಅವರು ಎರಡನೇ ಸುತ್ತಿನ ಮಾತುಕತೆ ನಡೆಸಿದ್ದರು. ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡಲ್ಲ ಎಂಬುದನ್ನು ತಿಳಿಸಿದ್ದಾರೆ.