ಮಂಡ್ಯ: ಇಂಥಹ ಘಟನೆ ಆಗಾಗ ಮರುಕಳಿಸುತ್ತಲೆ ಇದೆ. ಮಕ್ಕಳಿಗಾಗಿ ಮಾಡುವ ಅಡುಗೆ ಮನೆಯಲ್ಲಿ ಗಾಳಿ ಬೆಳಕು ಸರಿಯಾಗುದ್ದರು, ಬಿಸಿಯೂಟ ತಯಾರಿಸುವಾಗ ಬಹಳ ಎಚ್ಚರದಿಂದ ಇರಬೇಕಾಗುತ್ತದೆ. ಆದರೆ ಸ್ವಲ್ಪ ಯಾಮಾರಿದರು, ಇಂತ ಘಟನೆಗಳು ನಡೆಯುತ್ತಲೇ ಇರುತ್ತವೆ. ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಅಂಬರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಹಲ್ಲಿ ಬಿದ್ದಿದೆ. ಆದರೆ ಅದನ್ನು ಗಮನಿಸಿದೆ ಮಕ್ಕಳಿಗೆ ಊಟ ಬಡಿಸಲಾಗಿದೆ. ಅದನ್ನು ತಿಂದ 19 ವಿದ್ಯಾರ್ಥಿನಿಯರು ಮತ್ತು 10 ವಿದ್ಯಾರ್ಥಿಗಳು, ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಅಸ್ವಸ್ಥಗೊಂಡಿದ್ದಾರೆ. ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿಎಚ್ ಓ, ಮಕ್ಕಳು ಹಲ್ಲಿ ಬಿದ್ದ ಆಹಾರ ಸೇವಿಸಿ ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರಿಗೆ ಉಪ್ಪು ನೀರು ಕುಡಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೆ ಎಂ ದೊಡ್ಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.