ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 588 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 18871 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 50517 RTPCR ಟೆಸ್ಟ್ ಸೇರಿದಂತೆ ಒಟ್ಟು 69388 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 588 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 353 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ 1692 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 19 ಜನ ಸಾವನ್ನಪ್ಪಿದ್ದಾರೆ.