ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಫೆ. 19 : 2023-24 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‍ಗಳಿಗೆ ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ.
ನಗರದಲ್ಲಿಂದು ಪ್ರತಿಭಟನೆಯನ್ನು ನಡೆಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ ಈಗಾಗಲೇ 2023-24ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‍ಗಳಿಗೆ ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶಾತಿ ಕೊಡದೆ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವಂತಹ ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡುವುದಿಲ್ಲವೆಂದು ಆದೇಶವನ್ನು ಹಿಂಪಡೆದು, ಮ್ಯಾನೇಜ್‍ಮೆಂಟ್ ಕೋಟಾದಡಿಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ನೀಡಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳನ್ನು ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರು, ಕನಕರಾಜ್.ಆರ್ ಕೋಡಿಹಳ್ಳಿ, ನಗರ ಕಾರ್ಯದರ್ಶಿ ಗೋಪಿ, ಕಾರ್ಯಕರ್ತರಾದ ಯುವರಾಜ್ ಹೆಗಡೆ, ದಾನೇಶ್.ಬಿ, ಅಜಯ್, ಹನುಮಂತ, ಚಿದಾನಂದ, ಅಜಯ್‍ಕುಮಾರ್, ಮಣಿಕಂಠ, ರಮೇಶ್ ಇನ್ನು ಉಪಸ್ಥಿತರಿದ್ದರು.