ಚಿತ್ರದುರ್ಗ, (ಮಾ.02): ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಕಾಯ್ದೆಯಡಿ ಜೈಲಿನಲ್ಲಿದ್ದಾರೆ. ಆದರೆ ಮಠದ ಆಡಳಿತ ಅಧಿಕಾರಕ್ಕೆ ಸಂಬಂಧಿಸಿದಂತೆ ಮಠದ ಅಧಿಕಾರ ಚಲಾಯಿಸುವ ಅವರ ಹಕ್ಕಿಗೆ ಚಿತ್ರದುರ್ಗದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಲಾಗಿತ್ತು. ಆ ನಿರ್ಬಂಧವನ್ನು ಪ್ರಶ್ನಿಸಿ ಹೈ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಆ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಎಸ್ ಜೆ ಎಂ ವಿದ್ಯಾಪೀಠದ ಎಚ್. ಎಂ. ವಿಶ್ವನಾಥ್ ಮತ್ತು ಮಠದ ಪ್ರಸ್ತುತ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿಯವರು ಈ ಅರ್ಜಿಯನ್ನು ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಮೂರ್ತಿ ಕೃಷ್ಣಾ ಎಸ್ ದೀಕ್ಷೀತ್ ಅವರ ಏಕಸದಸ್ಯ ಪೀಠ ಆ ಅರ್ಜಿ ವಿಚಾರಣೆಯನ್ನು ಇಂದು (ಗುರುವಾರ) ಮಧ್ಯಾನ್ಹ 2:30 ರ ವೇಳೆಗೆ ನಡೆಸಲಿದೆ.
ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ 1988 ಕಲಂ 8 (2)ರಡಿ ಶರಣರು ತಮ್ಮ ಅಧಿಕಾರ ಚಲಾಯಿಸಲು ಜಿಲ್ಲಾಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಕಾನೂನು ಬಾಹಿರ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.