ಚಿತ್ರದುರ್ಗ, (ಮಾರ್ಚ್.10) : ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಅಧೀನದ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಏಪ್ರಿಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023-24ನೇ ಸಾಲಿನಲ್ಲಿ 2023ರ ಮೇ 02 ರಿಂದ 2024ರ ಫೆ.29 ರವರೆಗಿನ ಅವಧಿಯ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in
ನಲ್ಲಿ ಮಾಚ 11 ರಿಂದ ಏಪ್ರಿಲ್ 12 ರವರೆಗೆ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.
ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು.
ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.
ತರಬೇತಿಗೆ ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅದರಲ್ಲಿ 4 ಮಹಿಳೆಯರು, 11 ಪುರುಷರು, ಪರಿಶಿಷ್ಟ ಜಾತಿ 02, ಪರಿಶಿಷ್ಟ ಪಂಗಡಕ್ಕೆ 1 ಮೀಸಲಾತಿ ಇದೆ.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರ ತರಬೇತಿಯನ್ನು ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್‍ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷ ದಿಂದ 33 ವರ್ಷ, ಮಾಜಿ ಸೈನಿಕರಿಗೆ 33 ವರ್ಷ ದಿಂದ 65 ವರ್ಷ ವಯಸ್ಸಿನವರಾಗಿರಬೇಕು. ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಾನುಸಾರ ಆಯ್ಕೆ ವಿಧಾನ ನಡೆಯಲಿದೆ.
ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ Deputy Director of Horticulture (ZP) Chitradurga ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಏಪ್ರಿಲ್ 12ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.