ಬೀದರ್: ಹೊಟೇಲ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಅನ್ಯಕೋಮಿನ ಗುಂಪೊಂದು ಹಿಂದೂ ಕಾರ್ಯಕರ್ತನ ಮೇಲೆ ಗಂಭೀರವಾಗಿ ಹಲ್ಕೆ ಮಾಡಿದ್ದಾರೆ. ನೂರ್ ಖಾನ್ ಕಾಲೋನಿಯ ಜೈ ಭವಾನಿ ಫಾಸ್ಟ್ ಫುಡ್ ನಲ್ಲಿ ಈ ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿಯೇ ಈ ಘಟನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಲರಾಮ್ ಎಂಬುವವನ ಮೇಲೆ ಹಲ್ಲೆ ನಡೆಸಿದ್ದು, ಹೊಟೇಲ್ ನಲ್ಲಿದ್ದ ಶಿವಾಜಿ ಮೂರ್ತಿಯನ್ನು ಧ್ವಂಸ ಮಾಡಿದ್ದಾರೆ. ಸದ್ಯ ಬಲರಾಮ್ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಬಲರಾಮ್ ಗೋ ರಕ್ಷಣೆ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರೀಯರಾಗಿದ್ದ ಎಂಬ ಕಾರಣಕ್ಕೆ ಅನ್ಯಕೋಮಿನ ಜನ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಿದ್ದಾರೆ.