Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಯುಷ್ಮಾನ್ ಭವ ಅಂದೋಲನ :  ಎಲ್ಲರೂ ಆಯುಷ್ಮಾನ್ ಕಾರ್ಡ್ ಪಡೆಯಿರಿ : ಡಿಹೆಚ್‍ಓ ಡಾ.ಆರ್.ರಂಗನಾಥ್

Facebook
Twitter
Telegram
WhatsApp

 

ಚಿತ್ರದುರ್ಗ. ಸೆ.27: ಆರೋಗ್ಯ ಸುರಕ್ಷತಾ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಆರೋಗ್ಯ ಇಲಾಖೆಯಿಂದ ಆಯುಷ್ಮಾನ್ ಭವ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.

ನಗರದ ಐತಿಹಾಸಿಕ ಕೋಟೆ ಆವರಣದ ಬನಶಂಕರಿ ದೇವಸ್ಥಾನದ ಬಳಿ ಬುಧವಾರ ಜಿಲ್ಲಾ ಆರೋಗ್ಯ ಇಲಾಖೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಇವರ ಸಹಯೋಗದೊಂದಿಗೆ ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಆರೋಗ್ಯ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಆಯುಷ್ಮಾನ್ ಭವ ಆಂದೋಲನದಲ್ಲಿ ವಿವಿಧ ಕಾರ್ಯ ಚಟುವಟಿಕೆಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆಯೋಜಿಸಲಾಗುತ್ತಿದೆ.

ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಕ್ರಿಯವಾಗಿ ನಡೆಯಲಿದೆ. ಆಂದೋಲನದ ಅಂಗವಾಗಿ ಆಯುಷ್ಮಾನ್ ಕಾರ್ಡ್‌ಗಳ ನೋಂದಣಿ ಮತ್ತು ವಿತರಣೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಡಿಯಲ್ಲಿ ಮನೆ ಬಾಗಿಲಿಗೆ ಆಯುಷ್ಮಾನ್ ಕಾರ್ಡ್‍ಗಳನ್ನು ನೀಡಲಾಗುವುದು.

ಅಲ್ಲದೆ ಅಸಾಂಕ್ರಾಮಿಕ ರೋಗಗಳ ಪತ್ತೆ ಹಾಗೂ ತಪಾಸಣೆ, ಕ್ಷಯ ರೋಗ,  ಮಲೇರಿಯಾ ಡೆಂಗ್ಯೂ, ಚಿಕನ್ ಗುನ್ಯಾ, ಕೀಟ ಜನ್ಯ ರೋಗಗಳು, ಕುಷ್ಠರೋಗ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ, ತಾಯಿ ಮತ್ತು ಮಕ್ಕಳ ಆರೋಗ್ಯ ಹಾಗೂ ಪೌಷ್ಠಿಕ ಆರೋಗ್ಯ ಶಿಬಿರ, ಸಿಕ್ಕಲ್ ಸೆಲ್ ಅನಿಮೀಯಾ ತಪಾಸಣೆ (ಬುಡಕಟ್ಟು ಜನಾಂಗದವರಿಗೆ) ಇತರೆ ಪ್ರದೇಶದಲ್ಲಿ ಕಣ್ಣಿನ ತಪಾಸಣೆ ಹಾಗೂ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು ಎಂದರು.

ಮಹಾತ್ಮ ಗಾಂಧೀಜಿಯವರ ಜನ್ಮ ದಿನವಾದ ಅಕ್ಟೋಬರ್ 2ರಂದು ಜಿಲ್ಲೆಯ ಎಲ್ಲ ಗ್ರಾಮ ಹಾಗೂ ನಗರ ಆರೋಗ್ಯ ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ಅರಿವು ಮೂಡಿಸುವರು.  ಸಾರ್ವಜನಿಕರು ಈ ಮೇಳದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚಂದ್ರಶೇಖರ್ ಕಂಬಳಿಮಠ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ಬುದ್ಧನಗರ ಆರೋಗ್ಯ ಕೇಂದ್ರದ ಎಲ್ಲ ಆರೋಗ್ಯ ಸಿಬ್ಬಂದಿಗಳು, ಯೋಗ ಶಿಕ್ಷಕರು, ಸಾರ್ವಜನಿಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!