Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಆಗಿ 6 ತಿಂಗಳ ಸಂಭ್ರಮದ ಜೊತೆಗೆ ಹುಟ್ಟುಹಬ್ಬ ಆಚರಣೆ

Facebook
Twitter
Telegram
WhatsApp

ಬೆಂಗಳೂರು: ಇಂದು ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಎರಡೆರಡು ಸಂಭ್ರಮ. ‌ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ದಿನ. ಇಂದಿಗೆ ಆರು ತಿಂಗಳು. ಈ ಆರು ತಿಂಗಳಲ್ಲಿ ಸಿಎಂ ಸ್ಥಾನ ಅಲಂಕರಿಸಿದಾಗಿನಿಂದಲೂ ಬಸವರಾಜ್ ಬೊಮ್ಮಾಯಿ ಅವರು ಯಶಸ್ವಿಯಾಗಿ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ.

ಇವರ ಅಧಿಕಾರಾವಧಿ ಹೈಕಮಾಂಡ್ ನಾಯಕರಿಗೂ ಪ್ರೀತಿಯಾಗಿದೆ. ಸಾಕಷ್ಟು ಬಾರಿ ಬೊಮ್ಮಾಯಿ ಅವರನ್ನ ಹೊಗಳಿದ್ದಾರೆ. ಮುಂದಿನ ಚುನಾವಣೆಯೂ ಇವರ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ. ಇದರ ಜೊತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಸಂಭ್ರಮ ಕೂಡ.

ಇಂದು ಸಿಎಂ ಬೊಮ್ಮಾಯಿ ಅವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ ಅವರ ನಿವಾಸದಲ್ಲೇ ಗೋ ಪೂಜೆ ಮಾಡಿದ್ದಾರೆ. ಆರ್ ಟಿ ನಗರದ ನಿವಾಸದಲ್ಲಿ ಗೋವುಗಳನ್ನ ಕರೆಸಿ, ಬೊಮ್ಮಾಯಿ ದಂಪತಿ ಅವರು ಪೂಜೆ ಸಲ್ಲಿಸಿದ್ದಾರೆ. ಇನ್ನು ಮಾರುತಿ ದೇವಾಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲೂ ಸಿಎಂ ಅವರಿಗೆ ಆರೋಗ್ಯ, ಆಯಸ್ಸು ನೀಡಲಿ ಎಂದು ಬೆಂಬಲಿಗರು, ಕಾರ್ಯಕರ್ತರು ಕೂಡ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!