Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಅಪ್ಪನ ಮನೆ ಆಸ್ತಿನಾ’ ಪದ ಬಳಕೆಗೆ ಸಿದ್ದರಾಮಯ್ಯರ ಬಳಿ ಕ್ಷಮೆ ಕೇಳಿದ ಬಿಜೆಪಿ ನಾಯಕ ಬೆಲ್ಲದ್..!

Facebook
Twitter
Telegram
WhatsApp

ಬೆಂಗಳೂರು: ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಕೋರಿದ್ದಾರೆ. ದಿನಾಂಕ: 24/08/2024 ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ ಎಂದು ಪತ್ರ ಬರೆದಿದ್ದಾರೆ.

ಇದನ್ನು ಶೇರ್ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

 

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!