ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್ ಗೆ ಇಂದು ಷರತ್ತುಬದ್ಧ ಜಾಮೀನು ಸಿಕ್ಕಿದೆ. ಇಬ್ಬರ ಶ್ಯೂರಿಟಿ ಮತ್ತು ಒಂದು ಲಕ್ಷ ರೂಪಾಯಿ ಬಾಂಡ್ ಪಡೆದು ಜಾಮೀನು ನೀಡಿದೆ.
ಚೇತನ್ ಪರ ಇಂದು ವಕೀಲರಾದ ಬಾಲನ್ ವಾದ ಮಂಡಿಸಿದ್ದರು. ವಾದ ಆಲಿಸಿದ್ದ 32ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಕರೆದಾಗೆಲ್ಲ ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದೆ..
ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ಅವರ ಮೇಲೆ ಸುಮೋಟೋ ಕೇಸ್ ದಾಖಲಿಸಿದ್ದರು. 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿತ್ತು. ಇಂದು ಷರತ್ತುಬದ್ಧ ಜಾಮೀನು ಸಿಕ್ಕಿದೆ.