Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಹೊಸ ವರ್ಷಾಚರಣೆಗೆ ಷರತ್ತುಗಳು : ಮಾರ್ಗಸೂಚಿ ಬಿಡುಗಡೆ..!

Facebook
Twitter
Telegram
WhatsApp

ಚಿತ್ರದುರ್ಗ ಡಿ. 27 : ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಬೂಸ್ಟರ್ ಡೋಸ್ ಲಸಿಕಾಕರಣ, ಸಂಶಯಾಸ್ಪದ ಪ್ರಕರಣಗಳಲ್ಲಿ ಮಾದರಿ ಸಂಗ್ರಹಿಸಿ ಆರ್‍ಟಿಪಿಸಿಆರ್ ಪರೀಕ್ಷೆ ನಡೆಸುವುದು ಹಾಗೂ ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸುವ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಮಂಗಳವಾರ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಸೂಚನೆಗಳನ್ನು ನೀಡಿದರು.

ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಸದ್ಯ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಬಗ್ಗೆ ವರದಿ ಬರುತ್ತಿವೆ.  ಭಾರತದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಕುರಿತಂತೆ ಜನರು ಗಾಬರಿಗೊಳ್ಳುವಂತಹ ಯಾವುದೇ ಪರಿಸ್ಥಿತಿ ಸದ್ಯ ಇಲ್ಲ.  ಹೀಗಾಗಿ ಜನರು ಅನಾವಶ್ಯಕವಾಗಿ ಭಯ ಬೀಳುವ ಅಥವಾ ಆತಂಕ ಪಡುವ ಅಗತ್ಯವಿಲ್ಲ.  ಆದರೆ ತಜ್ಞರ ಸಲಹೆಗಳಂತೆ ನಾವೆಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಈಗಿನಿಂದಲೇ ವಹಿಸುವುದು ಅಗತ್ಯವಾಗಿದೆ.  ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸಬೇಕು, ಆದಷ್ಟು ಜನನಿಬಿಡ ಸ್ಥಳಗಳಿಂದ ದೂರ ಇರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಮಾಡಿಕೊಂಡು, ಕೈ ಸ್ವಚ್ಛವಾಗಿರಿಸಿಕೊಳ್ಳಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ತಪ್ಪದೆ ಮಾಸ್ಕ್ ಧರಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾಗಬೇಕು.  ಭಾರತದಲ್ಲಿ ಕೋವಿಡ್ ನಿರೋಧಕ ಲಸಿಕಾ ಕಾರ್ಯಕ್ರಮ ಉತ್ತಮವಾಗಿ ನಡೆದಿದ್ದು, ಜನರಲ್ಲಿ ರೋಗ ನಿರೋಧಕ ಶಕ್ತಿ ಉತ್ತಮಗೊಂಡಿದ್ದರಿಂದ, ಮರಣ ಪ್ರಮಾಣ ತಗ್ಗಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.  ಹೀಗಾಗಿ ಕೋವ್ಯಾಕ್ಸಿನ್, ಕೋವಶೀಲ್ಡ್ ಲಸಿಕೆಯ ಎರಡನೆ ಡೋಸ್ ಪಡೆದು 6 ತಿಂಗಳು ಪೂರ್ಣಗೊಂಡವರು, ಬೂಸ್ಟರ್ ಡೋಸ್ ಅನ್ನು ಮುನ್ನೆಚ್ಚರಿಕೆಯಾಗಿ ಪಡೆದುಕೊಳ್ಳಬೇಕು.  ಜಿಲ್ಲೆಯಲ್ಲಿ ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಸೇವೆ ಕಾರ್ಯಕರ್ತರು ಬೂಸ್ಟರ್ ಡೋಸ್ ಪಡೆದ ಪ್ರಮಾಣ ಶೇ. 98 ಕ್ಕಿಂತ ಹೆಚ್ಚಿದ್ದು, ಆದರೆ ಸಾರ್ವಜನಿಕರಲ್ಲಿ ಇದರ ಪ್ರಮಾಣ ಕೇವಲ ಶೇ. 12 ರಷ್ಟು ಮಾತ್ರ ಇದೆ.  ಇದುವರೆಗೂ ಜಿಲ್ಲೆಯಲ್ಲಿ 10.40 ಲಕ್ಷ ಜನರು ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿದ್ದು, ಎಲ್ಲರೂ ತಪ್ಪದೆ ಬೂಸ್ಟರ್ ಡೋಸ್ ಅನ್ನು ಪಡೆಯಲು ಮುಂದಾಗಬೇಕು.  ಇದಕ್ಕೆ ಅಗತ್ಯವಿರುವ ವ್ಯಾಕ್ಸಿನ್ ಡೋಸ್‍ಗಳನ್ನು ಸಂಗ್ರಹಿಸಲು ಈಗಾಗಲೆ ಆರೋಗ್ಯ ಇಲಾಖೆ ಕ್ರಮ ವಹಿಸಿದೆ.  ಬರುವ ಜನವರಿ ಒಳಗಾಗಿ ಕನಿಷ್ಟ 5 ಲಕ್ಷ ಜನರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡುವ ಮೂಲಕ ಶೇ. 50 ರಷ್ಟು ಸಾಧನೆ ಮಾಡುವ ಗುರಿ ನಿಗದಿಪಡಿಸಲಾಗಿದ್ದು, ಆಯಾ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು, ಎಲ್ಲ ತಾಲ್ಲೂಕು ಆಸ್ಪತ್ರೆಗಳು, ಪಿಹೆಚ್‍ಸಿ, ಸಿಹೆಚ್‍ಸಿ, ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

 

ಹೊಸ ವರ್ಷಾಚರಣೆಗೆ ಷರತ್ತುಗಳು :

ಚಿತ್ರದುರ್ಗ, (ಡಿ.27) :  ಹೊಸ ವರ್ಷದ ಸಂಭ್ರಮಾಚರಣೆಗೆ ಷರತ್ತುಗಳನ್ನು ವಿಧಿಸಲಾಗಿದ್ದು, ಮಾರ್ಗಸೂಚಿಯನ್ವಯ ಆಚರಣೆ ಡಿಸೆಂಬರ್ 31 ಹಾಗೂ ಜನವರಿ 01 ರ ಮಧ್ಯರಾತ್ರಿ 01 ಗಂಟೆಯೊಳಗಾಗಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.

ತಪ್ಪದೆ ಎಲ್ಲರೂ ಮಾಸ್ಕ್ ಧರಿಸಬೇಕು, ಅಲ್ಲದೆ ಎಲ್ಲ ಹೊಟೇಲ್, ಪಬ್, ಬಾರ್ ಅಂಡ್ ರೆಸ್ಟೋರೆಂಟ್ಸ್, ಕ್ಲಬ್ಸ್ ಇತ್ಯಾದಿಗಳು ಕೂಡ ಮಧ್ಯರಾತ್ರಿ 01 ಕ್ಕೆ ಮುಚ್ಚಬೇಕು.  ದೊಡ್ಡ ಪ್ರಮಾಣದ ಗುಂಪು ಸೇರುವ ಸಭೆಯನ್ನು ಆದಷ್ಟು ಮಧ್ಯಾಹ್ನದ ಸಮಯದಲ್ಲಿ ಮತ್ತು ಹೊರಾಂಗಣ ಪ್ರದೇಶದಲ್ಲಿ ಹಮ್ಮಿಕೊಳ್ಳಬೇಕು. ನಿಗಧಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಸೇರಿಸುವಂತಿಲ್ಲ ಹಾಗೂ ಹೋಟೆಲ್, ಪಬ್, ರೆಸ್ಟೋರೆಂಟ್‍ಗಳಲ್ಲಿ ನಿಗದಿತ ಆಸನ ಸಾಮಥ್ರ್ಯಕ್ಕಿಂತ ಹೆಚ್ಚಾಗಿ ಆಸನ ವ್ಯವಸ್ಥೆ ಮಾಡುವಂತಿಲ್ಲ.

ಸಮಾರಂಭಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಬಳಸುವುದು ಮತ್ತು ಬಂದವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು.  ಸಮಾರಂಭ ಆಯೋಜಕರು, ಸಿಬ್ಬಂದಿಗಳು ಬೂಸ್ಟರ್ ಡೋಸ್ ತೆಗೆದುಕೊಳ್ಳುವುದು, ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ.  ಸಿನಿಮಾ ಮಂದಿರ ಪ್ರವೇಶಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ತಹಸಿಲ್ದಾರರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು, ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಟೆಸ್ಟಿಂಗ್ ಹೆಚ್ಚಿಸಲು ಸೂಚನೆ :
ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೋವಿಡ್ ಆರ್‍ಟಿಪಿಸಿಆರ್ ಟೆಸ್ಟ್ ಮಾಡಬೇಕು, ಪಾಸಿಟಿವ್ ಬಂದ ಎಲ್ಲ ಪ್ರಕರಣಗಳನ್ನು ಜಿನೋಟಿಕ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸಿಕೊಡಬೇಕು, ಇದರಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸುವಂತಿಲ್ಲ.  ಖಾಸಗಿ ಆಸ್ಪತ್ರೆಯವರೂ ಕೂಡ ಜ್ವರ, ಶೀತ ಹಾಗೂ ಕೆಮ್ಮು ರೋಗಗಳ ಪ್ರಕರಣಗಳನ್ನು ಆರ್‍ಟಿಸಿಪಿಸಿಆರ್ ಟೆಸ್ಟ್‍ಗೆ ಒಳಪಡಿಸಬೇಕು.  ಟೆಸ್ಟ್ ವರದಿಗಳನ್ನು 24 ಗಂಟೆಗಳ ಒಳಗಾಗಿ ನೀಡಬೇಕು.

ಸೋಂಕಿನ ಲಕ್ಷಣಗಳನ್ನು ಹೋಂದಿರುವವರನ್ನು ಪರೀಕ್ಷೆ ಮಾಡಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.  ಡಿಹೆಚ್‍ಒ ಡಾ. ರಂಗನಾಥ್ ಅವರು ಪ್ರತಿಕ್ರಿಯಿಸಿ, ಮಾದರಿಗಳನ್ನು ಪರೀಕ್ಷಿಸುವ ಮೂರು ಪ್ರಯೋಗಾಲಯ ಯೂನಿಟ್‍ಗಳು ನಮ್ಮಲ್ಲಿವೆ.  ದಿನಕ್ಕೆ ಗರಿಷ್ಟ 04 ಸಾವಿರ ಮಾದರಿಗಳನ್ನು ಟೆಸ್ಟ್ ಮಾಡುವ ಸಾಮಥ್ರ್ಯವಿದೆ ಎಂದರು.

ಚಿಕಿತ್ಸಾ ಸೌಲಭ್ಯಗಳು ಸಿದ್ಧವಾಗಿರಬೇಕು :
ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್‍ನ ಒಟ್ಟು ಮೂರು ಅಲೆಗಳನ್ನು ಎದುರಿಸಿದ ಅನುಭವವನ್ನು ಅಧಿಕಾರಿಗಳು, ವೈದ್ಯರು, ಹಾಗೂ ಸಿಬ್ಬಂದಿ ಹೊಂದಿದ್ದಾರೆ.  ಹೀಗಾಗಿ ಈ ಹಿಂದೆ ಕಂಡುಬಂದ ಸಮಸ್ಯೆಗಳಿಗೆ ಈಗಲೇ ಪರಿಹಾರ ಕಂಡುಕೊಂಡು, ಅದಕ್ಕೆ ತಕ್ಕಂತೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.  ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ, ಐಸಿಯು, ವೆಂಟಿಲೇಟರ್, ಆಕ್ಸಿಜನ್ ಘಟಕಗಳು, ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳು, ಅಗತ್ಯ ಔಷಧಿಗಳ ದಾಸ್ತಾನು ಸೇರಿದಂತೆ ಎಲ್ಲವೂ ಈಗಿನಿಂದಲೇ ಸಜ್ಜು ಮಾಡಿಕೊಳ್ಳಬೇಕು.  ನಮ್ಮಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂಬ ನಿರ್ಲಕ್ಷ್ಯ ತೋರದೆ, ಮುಂಜಾಗ್ರತಾ ಕ್ರಮವಾಗಿ ಎಲ್ಲ ಚಿಕಿತ್ಸಾ ಸೌಲಭ್ಯಗಳು, ಉಪಕರಣಗಳು, ಐಸಿಯು, ಆಕ್ಸಿಜನ್ ಘಟಕಗಳನ್ನು ಪರೀಕ್ಷಿಸಿ, ಬಳಕೆಗೆ ಲಭ್ಯವಿರುವಂತೆ ಸಿದ್ಧ ಮಾಡಿಟ್ಟುಕೊಳ್ಳಬೇಕು.  ಆಕ್ಸಿಜನ್ ಪೂರೈಕೆ ವ್ಯವಸ್ಥೆ ಖಚಿತಪಡಿಸಿಕೊಳ್ಳಲು ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಡ್ರೈ ರನ್ ಮಾಡಿ ಪರೀಕ್ಷಿಸಬೇಕು. ತುರ್ತು ಸಂದರ್ಭದಲ್ಲಿ ಅದು ಸರಿಯಿಲ್ಲ, ಇದು ಸರಿಯಿಲ್ಲ ಎಂಬ ಸಬೂಬು ಹೇಳುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್, ಡಿಹೆಚ್‍ಒ ಡಾ. ರಂಗನಾಥ್, ಉಪವಿಭಾಗಾಧಿಕಾರಿ ಚಂದ್ರಯ್ಯ, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ. ಕಾಶಿ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ಬಸವರಾಜ್, ತಹಸಿಲ್ದಾರ್ ಸತ್ಯನಾರಾಯಣ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು, ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ಯುದ್ಧ : ಶಿಶಿರ್ ಗೆ ಸವಾಲು ಹಾಕಿದ ಚೈತ್ರಾ..!

ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ ಶಿಶಿರ್ ಹಾಗೂ ಚೈತ್ರಾ ಅಣ್ಣ ತಂಗಿಯಂತೆ. ಚೈತ್ರಾ ಕುಗ್ಗಿದಾಗೆಲ್ಲ ಶಿಶಿರ್ ಧೈರ್ಯ ತುಂಬಿದ್ದಾರೆ. ಅದಕ್ಕಾಗಿಯೇ ಬಿಗ್ ಬಾಸ್ ತಂಗಿ ನಿನಗಾಗಿ ಎಂಬ ಫೋಸ್ಟರ್ ಅನ್ನೇ ರಿಲೀಸ್

ಬ್ಯಾಂಕ್‍ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮದಾನ

ಚಿತ್ರದುರ್ಗ. ನ.21: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಪರಿಸ್ಥಿತಿ ಮುಂದುವರೆದರೆ

error: Content is protected !!