Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ 30 ರಂದು ಚಿತ್ರದುರ್ಗದಲ್ಲಿ ಜಿಲ್ಲಾ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಜಿಲ್ಲಾ ಮಟ್ಟದ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ ಕಲೋತ್ಸವ : ಮಹಾಲಿಂಗಪ್ಪ ಮಾಹಿತಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.28) : ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಮಕ್ಕಳ ಶಿಕ್ಷಣ, ಹಾಸ್ಟೆಲ್ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಜಿಲ್ಲಾ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಜಿಲ್ಲಾ ಮಟ್ಟದ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ ಕಲೋತ್ಸವವನ್ನು ಜು.30 ರಂದು ಬೆಳಿಗ್ಗೆ 10-30 ಕ್ಕೆ ಕ್ರೀಡಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಳಸಮುದಾಯಕ್ಕೆ ಸೇರಬೇಕಾಗಿರುವ ಹಣದಲ್ಲಿ ರಾಜಕಾರಣಿಗಳು ಸಿ.ಸಿ.ರಸ್ತೆಗೆ ಹಾಕಿ ಕಮೀಷನ್ ಹೊಡೆಯುವುದರಲ್ಲಿ ಕಾಲ ಕಳೆದರೆ ವಿನಃ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಮಕ್ಕಳ ಶಿಕ್ಷಣ ಹಾಗೂ ಹಾಸ್ಟೆಲ್ ಸೌಲಭ್ಯಕ್ಕೆ ಒತ್ತು ಕೊಡಲಿಲ್ಲ. ಆಗ ನಾನು ಹೋರಾಡಿದ ಫಲವಾಗಿ ಚಿತ್ರದುರ್ಗಕ್ಕೆ ಮೂರು ಹಾಸ್ಟೆಲ್‍ಗಳನ್ನು ನೀಡಲಾಗಿದೆ. ಹಾಗಾಗಿ ಈ ಸಮ್ಮೇಳನದ ಮೂಲಕ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರಲ್ಲಿ ಉತ್ತೇಜನ ತುಂಬಲಾಗುವುದು ಎಂದು ಹೇಳಿದರು.

ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರತಾಪ್‍ಜೋಗಿ ಮಾತನಾಡಿ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ ಕಲೋತ್ಸವವನ್ನು ನಗರದಲ್ಲಿ ಏರ್ಪಡಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದಾರೆ.

ಮುರುಘಾಮಠದ ಬಸವಪ್ರಭು ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಎಂ.ಚಂದ್ರಪ್ಪ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಒಕ್ಕೂಟದ ಅಧ್ಯಕ್ಷ ತುಕಾರಾಮ ನಾಗಪ್ಪ ವಾಪರ ಇನ್ನು ಅನೇಕು ಆಗಮಿಸಲಿದ್ದಾರೆ.

ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು, ಕಲೆ ಸಾಂಸ್ಕøತಿಕ ಸಮಾಜಸೇವೆ, ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದವರನ್ನು ಕಲೋತ್ಸವದಲ್ಲಿ ಸನ್ಮಾನಿಸಲಾಗುವುದು. ಗೋಸಾಯಿಗಳು, ಚಿಂದಿ ಆರಿಸುವವರು, ಕಿನ್ನರಿಜೋಗಿಗಳು, ದಾಸರು ಹೀಗೆ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರು ತಮ್ಮ ತಮ್ಮ ಕುಲಕಸುಬನ್ನು ಸೂಚಿಸುವ ವೇಷಗಳನ್ನು ಧರಿಸಿ ಕಲೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ, ರಾಜ್ಯ ಕಾರ್ಯಾಧ್ಯಕ್ಷೆ ಎಸ್.ಆರ್.ಇಂದಿರಾ ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಬೇಂದ್ರಪ್ಪ ದಾಸರ್, ತಾಲ್ಲೂಕು ಅಧ್ಯಕ್ಷ ಹೆಂಜಾರಪ್ಪ, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಚಿಕ್ಕಣ್ಣ, ಗೊಲ್ಲ ಸಮುದಾಯದ ಎಸ್.ಲಕ್ಷ್ಮಿಕಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

ಭಗತ್ ಸಿಂಗ್ ರ ಕನಸಿನ ಸಮಾಜವಾದಿ ಭಾರತಕ್ಕೆ ಕೈಜೋಡಿಸಿ : ರವಿಕುಮಾರ್

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ಬಿಳಿಯರು ತೊಲಗಬಹದು, ನಮ್ಮವರೇ ನಮ್ಮನ್ನು ಆಳ್ವಿಕೆ ಮಾಡಿ ಜನರ ಶೋಷಣೆ ನಿಲ್ಲುವುದಿಲ್ಲ’ ಎಂದು ಭಗತ್ ಸಿಂಗ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನುಡಿದ್ದರು. ಅವರು ಹೇಳಿದ ಒಂದು

ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ದರ್ಶನ್ ಭಾವಚಿತ್ರ ಬಾವುಟ ಹಾರಾಟಕ್ಕೆ ಬ್ರೇಕ್..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆ

error: Content is protected !!