ದಕ್ಷಿಣ ಕನ್ನಡ: ಇತ್ತೀಚಿನ ದಿನಗಳಲ್ಲಿ ದೇವಸ್ಥಾನಗಳಿಗೆ ತುಂಡುಡುಗೆಯನ್ನು ತೊಟ್ಟು ಹೋಗೋ ಅಭ್ಯಾಸ ಹಲವರಲ್ಲಿದೆ. ಇದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ವಸ್ತ್ರ ಸಂಹಿತೆಗೆ ಒತ್ತಡ ಹಾಕ್ತಿವೆ.
ಈಗಾಗ್ಲೇ ಕೇರಳದಲ್ಲಿ ದೇವಸ್ಥಾನಗಳಿಗೆ ಬರುವಾಗ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಹೀಗಾಗಿ ನಮ್ಮಲ್ಲೂ ಮಾಡಿ ಅಂತ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ದಕ್ಷಿಣ ಕನ್ನಡ ಜಿಲ್ಲೆಗಳ ದೇವಾಲಯಗಳಲ್ಲಿ ವಸ್ತ್ರ ಸಂಹಿತೆಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ, ಪೊಳಿಲಿ ರಾಜರಾಜೇಶ್ವರಿ ದೇವಸ್ಥಾನಗಳಲ್ಲಿ ಮನವಿ ಮಾಡಿಕೊಂಡಿರುವ ಬ್ಯಾನರ್ ಅಳವಡಿಸಲಾಗಿದೆ. ಹಿಂದೂ ಸಂಪ್ರದಾಯದಂತೆ ಉಡುಗೆ ತೊಟ್ಟು ಬನ್ನಿ ಎಂದು ಮನವಿ ಮಾಡಿದ್ದಾರೆ.