ಚಿತ್ರದುರ್ಗ,(ಡಿಸೆಂಬರ್.21) : ಜಿಲ್ಲೆಯಲ್ಲಿ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಕೃಷಿ ಇಲಾಖೆ ಸೂಚಿಸಿದೆ.
ಫಲಾನುಭವಿಗಳು https://pmkisan.gov.inಗೆ ಭೇಟಿ ನೀಡಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಬಹುದು.
ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಬಹುದು. ಇ ಪ್ರಕ್ರಿಯೆಗಾಗಿ ಸಿಎಸ್ಸಿ ಕೇಂದ್ರದವರಿಗೆ ಶುಲ್ಕ ಪಾವತಿಸಬೇಕು.
ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ನೀಡಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿನಿರ್ದೇಶಕ ಪಿ.ರಮೇಶ್ಕುಮಾರ್ ತಿಳಿಸಿದ್ದಾರೆ.