ಚಿತ್ರದುರ್ಗ,(ಫೆಬ್ರವರಿ. 22) : ಅಭಿವೃದ್ಧಿ ಆಯುಕ್ತರು (ಕೈಮಗ್ಗ), ಜವಳಿ ಮಂತ್ರಾಲಯ, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ವ್ಯವಸ್ಥಾಪಕ ನಿರ್ದೇಶಕರು, ಕಾವೇರಿ ಹ್ಯಾಂಡ್‍ಲೂಮ್ ಹಾಗೂ ಚಿತ್ರದುರ್ಗ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ವಸ್ತ್ರಾಂಜಲಿ-2022” ಜಿಲ್ಲಾ ಕೈಮಗ್ಗ ಮೇಳ-ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ 23ರಂದು ಸಂಜೆ 5.30ಕ್ಕೆ ನಗರದ ವಾಸವಿ ಮಹಲ್ ರಸ್ತೆಯ ವಾಸವಿ ಮಹಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಕೈಮಗ್ಗ ಮೇಳ ಉದ್ಘಾಟನೆ ನೆರವೇರಿಸುವರು. ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಮೇಳದ ಮಳಿಗೆಗಳ ಉದ್ಘಾಟನೆ ನೆರವೇರಿಸುವರು.
ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರಿರಾಮುಲು ಗೌರವ ಆಹ್ವಾನಿತರಾಗಿ ಭಾಗವಹಿಸುವರು. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್, ಟಿ.ರಘುಮೂರ್ತಿ, ಕೆ.ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಜವಳಿ ಅಭಿವೃದ್ಧಿ ಆಯುಕ್ತ ಹಾಗೂ ನಿರ್ದೇಶಕ ಟಿ.ಹೆಚ್.ಎಂ.ಕುಮಾರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಕೈಮಗ್ಗ ಮತ್ತು ಜವಳಿ ಇಲಾಖೆ ಅಪರ ನಿರ್ದೇಶಕ ಸಿ.ಎಸ್.ಯೋಗೇಶ್, ಕಾವೇರಿ ಹ್ಯಾಂಡ್‍ಲೂಮ್ಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಮುದ್ದಯ್ಯ, ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿನಿರ್ದೇಶಕ ಬಿ.ಶ್ರೀಧರ ನಾಯಕ್, ನೇಕಾರರ ಸೇವಾ ಕೇಂದ್ರ ಉಪನಿರ್ದೇಶಕ ಜವಾಹರ್‍ಲಾಲ್ ಕುನ್ಸೋತ್ ಭಾಗವಹಿಸುವರು.
ಫೆ.23 ರಿಂದ ಫೆ.27 ರವರೆಗೆ ಜಿಲ್ಲಾ ಕೈಮಗ್ಗ ಮೇಳ: ಕೇಂದ್ರ ಪುರಸ್ಕøತ ನ್ಯಾಷನಲ್ ಹ್ಯಾಂಡ್‍ಲೂಮ್ ಡೆವಲಂಪ್‍ಮೆಂಟ್ ಪ್ರೋಗ್ರಾಮ್ ಯೋಜನೆಯಡಿ ಶಿವರಾತ್ರಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಇದೇ ಫೆ.23 ರಿಂದ 27 ರವರೆಗೆ ನಗರದ ವಾಸವಿ ಮಹಲ್‍ನಲ್ಲಿ ವಸ್ತ್ರಾಂಜಲಿ-2022 ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.
ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳ ಕೈಮಗ್ಗ ನೇಕಾರ ಸಹಕಾರ ಸಂಘಗಳ ನೇಕಾರರಿಂದ ಉತ್ಪಾದಿಸಲ್ಪಟ್ಟ ವಸ್ತುಗಳ ಮಾರಾಟವನ್ನು ಉತ್ತೇಜಿಸುವ ಸಲುವಾಗಿ ಭಾರತ ಸರ್ಕಾರದ ಸಹಯೋಗದೊಂದಿಗೆ ಈ ಮೇಳ ಆಯೋಜಿಸಲಾಗಿದೆ. ಈ ಮೇಳದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಶೇ.20ರಷ್ಟು ರಿಯಾಯಿತಿ ದರದಲ್ಲಿ ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿರುತ್ತದೆ.
ಈ ಮೇಳದಲ್ಲಿ ಜಿಲ್ಲೆಯ ಪ್ರಖ್ಯಾತ ಮೊಳಕಾಲ್ಮುರು ಅಪ್ಪಟ ರೇಷ್ಮೆ ಸೀರೆಗಳು, ಚಳ್ಳಕೆರೆಯ ವಿವಿಧ ನಮೂನೆಯ ಉಣ್ಣೆ ಕಂಬಳಿಗಳು ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ತಯಾರಾಗುತ್ತಿರುವ ಹತ್ತಿ ಕೈಮಗ್ಗ ಉತ್ಪನ್ನಗಳಾದ ಲುಂಗಿಗಳು, ಬೆಡ್‍ಶೀಟ್, ಶರ್ಟಿಂಗ್‍ಗಳು, ಕೈವಸ್ತ್ರ, ಟವಲ್, ಇಳಕಲ್ ಸೀರೆಗಳು ಇತ್ಯಾದಿ ಕೈಮಗ್ಗ ಉತ್ಪನ್ನಗಳು ನೇಕಾರ ಸಹಕಾರ ಸಂಘಗಳಿಂದ ನೇರವಾಗಿ ಗ್ರಾಹಕರಿಗೆ ಮಾರಾಟಕ್ಕೆ ಲಭ್ಯವಾಗುತ್ತವೆ.
ಈ ಮೇಳದಲ್ಲಿ ಭಾಗವಹಿಸುವ ನೇಕಾರ ಸಹಕಾರ ಸಂಘಗಳವರಿಗೆ ಉಚಿತವಾಗಿ 10*10 ಅಳತೆಯ ವಿದ್ಯುತ್ ಸೌಲಭ್ಯವನ್ನೊಳಗೊಂಡ ಸುಸಜ್ಜಿತ ಮಳಿಗೆಯನ್ನು ಉಚಿತವಾಗಿ ನೀಡಲಾಗುವುದು. ಮಳಿಗೆಗಳಲ್ಲಿ ಇರುವ ದಾಸ್ತಾನಿಗೆ ವಿಮೆ ಭದ್ರತೆಯನ್ನು ಒದಗಿಸಲಾಗುವುದು.
ನಗರದ ಗ್ರಾಹಕರು ಹೆಚ್ಚಿನದಾಗಿ ಮೇಳಕ್ಕೆ ಭೇಟಿ ನೀಡಿ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿ ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸಬೇಕು. ಮೇಳಕ್ಕೆ ಭೇಟಿ ನೀಡುವ ಗ್ರಾಹಕರು ಕಡ್ಡಾಯವಾಗಿ ಮುಖಗವಸು, ಸಾಮಾಜಿಕ ಅಂತರ ಮತ್ತು ಸ್ಯಾನಿಟೈಜರ್ ಬಳಸಬೇಕು ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಡಾ.ಶಿವರಾಜ್ ಆರ್.ಕುಲಕರ್ಣಿ ತಿಳಿಸಿದ್ದಾರೆ.