ನಟ ಗೋಲ್ಡನ್ ಸ್ಟಾರ್ ಗಣೇಶ್ ಗುಂಡ್ಲುಪೇಟೆ ತಾಲೂಕಿನ ಹಂಗಾಳ ಹೋಬಳಿಯ ಜಕ್ಕಳ್ಳಿ ಗ್ರಾಮದಲ್ಲಿ ಮನೆ ನಿರ್ಮಾಣದ ಕೆಲಸನಡೆಸುತ್ತಿದ್ದಾರೆ. ಆದರೆ ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದೆ ಎಂದು ಅರಣ್ಯ ಇಲಾಖೆ ನೋಟೀಸ್ ನೀಡಿತ್ತು. ಈ ನೋಟೀಸ್ ಸಂಬಂಧ ನಟ ಗಣೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಇದರ ವಿಚಾರಣೆ ನಡೆಸಿದ್ದು, ಒಂದು ವಾರದಲ್ಲಿ ಅರಣ್ಯ ಇಲಾಖೆಯ ನೋಟೋಸ್ ಗೆ ಪ್ರತಿಕ್ರಿಯೆ ನೀಡಿವಂತೆ ಸೂಚಿಸಿದೆ.
ಗಣೇಶ್ ಪರ ವಕೀಲರು ವಾದಿಸಿದ ಪ್ರಕಾರ, ನಟ ಗಣೇಶ್ ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡುತ್ತಿಲ್ಲ. 10 ಕಿಲೋಮೀಟರ್ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಬಾರದೆಂದು ಸುಪ್ರೀಂ ತೀರ್ಪಿನಲ್ಲಿ ಈಗ ಮಾರ್ಪಾಡಾಗಿದೆ. ಸದ್ಯಕ್ಕೆ ಅಲ್ಲಿ ಭೂಮಿಯನ್ನು ಸಮತಟ್ಟು ಮಾಡಿ, ಸ್ಟೀಲ್ ಕಟ್ಟೆವನ್ನಷ್ಟೇ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ನೀಡಿರುವ ನೋಟೀಸ್ ಗೆ ತಡೆಯಾಜ್ಞೆ ತರಬೇಕೆಂದು ವಕೀಲರು ಮನವಿ ಮಾಡಿದ್ದಾರೆ. ಇನ್ನು ಹೈಕೋರ್ಟ್ ಕೂಡ ವಕೀಲರು ಹೇಳಿದ ಹೇಳಿಕೆ, ನೊಇಡಿದ ಸಾಕ್ಷ್ಯಾಧಾರಗಳನ್ನು ಗಮನಹರಿಸಿದ್ದಾರೆ.
ನಾಲ್ಕು ವಾರದಲ್ಲಿ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅರಣ್ಯ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಗಣೇಶ್ ಅವರಿಗೆ ಸಂಪೂರ್ಣ ರಿಲೀಫ್ ಸಿಗದಿದ್ದರೂ ಈಗ ಮತ್ತೆ ವಿವಾದ ಅರಣ್ಯ ಇಲಾಖೆಗೆ ವರ್ಗಾವಣೆಯಾಗಿದೆ. ಅರಣ್ಯ ಇಲಾಖೆ ಗಣೇಶ್ ಅಹವಾಲನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಕಾಂಕ್ರಿಟ್ ತಳಪಾಯದ ಕಟ್ಟಡದ ಕಾಮಗಾರಿ ನಡೆಸಲಾಗುತ್ತಿದೆ. ಶಾಶ್ವತ ಕಟ್ಟಡಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು’ ಮೌಖಿಕವಾಗಿ ಕೋರ್ಟ್ ಅಭಿಪ್ರಾಯಪಟ್ಟಿದೆ