Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈ ಶುಗರ್ ಕಾರ್ಖಾನೆ ಸರ್ಕಾರದಿಂದಲೇ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ

Facebook
Twitter
Telegram
WhatsApp

ಬೆಂಗಳೂರು: ಮಂಡ್ಯ ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರವನ್ನು ರಾಜ್ಯ ಸರ್ಕಾರ ಸದ್ಯಕ್ಕೆ ಕೈ ಬಿಟ್ಟಿದೆ. ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ರು,. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಲೀಸ್ ಗೆ ನೀಡುವ ಸಚಿವ ಸಂಪುಟದ ನಿರ್ಣಯವನ್ನು ತಾತ್ಕಾಲಿಕವಾಗಿ ತಡೆ ಹಿಡಿದು, ಸರ್ಕಾರವೇ ನಡೆಸುವ ಪ್ರಯತ್ನ ಮಾಡಲಾಗುವುದು. ಕಾರ್ಖಾನೆಯ ಪುನರುಜ್ಜೀವನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇನ್ನೂ ಮಂಡ್ಯ ಪ್ರತಿನಿಧಿಗಳು ಹಾಗೂ ರೈತ ಮುಖಂಡರ ಜೊತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ, ಮೈಶುಗರ್ ಗೆ ಒಬ್ಬ ಅನುಭವಿ ಹಿರಿಯ ತಜ್ಞರ ನೇತೃತ್ವದಲ್ಲಿ ಸಮೀತಿ ನೇಮಕ ಮಾಡಲಾಗುವುದು. ತಜ್ಞರ ಸಮಿತಿ ಮೂರು ತಿಂಗಳಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಲಿದೆ ವರದಿಯನ್ನು ಆಧಾರವಾಗಿಟ್ಟುಕೊಂಡು ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಕ್ರಮಗಳನ್ನು ವಹಿಸಲಾಗುವುದು.‌ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಯಂತ್ರೋಪಕರಣಗಳ ದುರಸ್ಥಿಗೆ ಆರ್ಥಿಕ ನೆರವು ನೀಡಲಾಗುವುದು. ಬರುವ ಹಂಗಾಮಿನಿಂದ ಕಬ್ಬು ನುರಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಖಾನೆ ಪುನರಾರಂಭಕ್ಕೆ ಅಗತ್ಯವಿರುವ ಹಣಕಾಸಿನ ವಿವರ ಹಾಗೂ ದುಡಿಯುವ ಬಂಡವಾಳ ಕುರಿತಂತೆ ಮಾಹಿತಿ ಒದಗಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಡಿಸ್ಟಿಲರಿ, ಎಥಿನಾಲ್, ಮೊಲ್ಯಾಸಿಸ್, ಕೊ-ಜನರೇಷನ್ ಮತ್ತಿತರ ಉಪ ಉತ್ಪನ್ನಗಳ ತಯಾರಿಕೆ ಪ್ರಾರಂಭಿಸುವ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು. ತಜ್ಞರು ನೀಡುವ ವರದಿಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲಾ ಅಂಶಗಳ ಕುರಿತು ಚರ್ಚಿಸಿ, ಒಪ್ಪಿಗೆ ಪಡೆದು ಮುಂದಿನ‌ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಗಳು ಮೈಷುಗರ್ ಪುನಶ್ಚೇತನಕ್ಕೆ ಸಾಕಷ್ಟು ವ್ಯಯಿಸಿದ್ದರೂ ಯಶಸ್ಸು ದೊರೆತಿಲ್ಲ. ಕಳೆದ ಮೂರು ವರ್ಷದಿಂದ ಫ್ಯಾಕ್ಟರಿ ಬಂದ್ ಕಬ್ಬು ಬೆಳೆಗಾರರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ ಆರ್ ಓ ಟಿ ಮೂಲಕ ನಡೆಸಲು ತೀರ್ಮಾನಿಸಿತ್ತು. ಆದರೆ ರೈತರು, ಜನಪ್ರತಿನಿಧಿಗಳು ಇದನ್ನು ವಿರೋಧಿಸಿದ್ದಾರೆ. ಹಾಗಾದರೆ ಮೈಷುಗರ್ ಪುನಶ್ಚೇತನಕ್ಕೆ ಮುಂದಿನ ನಡೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Gold Price Today : 90 ಸಾವಿರದ ಸಮೀಪಕ್ಕೆ ಬೆಳ್ಳಿ : ಬಂಗಾರದ ಬೆಲೆ ಎಷ್ಟು ಗೊತ್ತಾ ?

  ಸುದ್ದಿಒನ್ :  ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಳಿತಗಳು ಆಗುತ್ತಿರುತ್ತವೆ.  ಬೆಲೆಗಳು ಒಂದು ದಿನ ಕಡಿಮೆಯಾದರೆ ಮತ್ತೆ ಮರುದಿನ ಏರಿಕೆಯಾಗುತ್ತವೆ. ಈಗ ಮದುವೆ ಸೀಸನ್ ಅಲ್ಲದಿದ್ದರೂ ಬೆಲೆ ಹೆಚ್ಚುತ್ತಲೇ

ಮನೆ ಇಲ್ಲ, ಕಾರು ಇಲ್ಲ.. ಪ್ರಧಾನಿ ಮೋದಿ ಆಸ್ತಿ ಎಷ್ಟು ಕೋಟಿ ಗೊತ್ತಾ?

ಸುದ್ದಿಒನ್ :  ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ನಾಮನಿರ್ದೇಶನದ ಸಂದರ್ಭದಲ್ಲಿ, ಮೋದಿ ಅವರು

ಅಂಕಿತಾ ಸಾಧನೆ ಕೊಂಡಾಡಿದ ಸಿಎಂ ಸಿದ್ದರಾಮಯ್ಯ: ಮೆಳ್ಳಿಗೇರಿ ಶಾಲೆಗೆ 50 ಲಕ್ಷ ಅನುದಾನ

ಬಾಗಲಕೋಟೆ: ಇತ್ತಿಚೆಗಷ್ಟೇ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಆ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಏಕೈಕ ವಿದ್ಯಾರ್ಥಿನಿ ಫಸ್ಟ್ ರ್ಯಾಂಕ್ ಬಂದಿರುವುದು. ಬಾಗಲಕೋಟೆಯ ಅಂಕಿತ. ಬಡತನದಲ್ಲಿಯೇ ಬೆಳೆದರು ಇಡೀ ರಾಜ್ಯಕ್ಕೆ ಫಸ್ಟ್ ರ್ಯಾಂಕ್ ಬಂದಿದ್ದಾರೆ. ಅಂಕಿತಾಗೆ

error: Content is protected !!