ನವದೆಹಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆಯ ಕರೆ ಬಂದಿದೆ. ಈ ಸಂಬಂಧ ಅವರೇ ದೂರು ದಾಖಲಿಸಿದ್ದಾರೆ. ಬಳಿಕ ಪೊಲೀಸರು ಗೌತಮ್ ಗಂಭೀರ್ ಮನೆಗೆ ಹೆಚ್ಚಿನ ಭದ್ರತೆ ನೀಡಿದ್ದಾರೆ.
ಇ – ಮೇಲ್ ನಲ್ಲಿ ಈ ರೀತಿ ಜೀವ ಬೆದರಿಕೆ ಹಾಕಿದ್ದಾರೆಂದು ದೂರು ದಾಖಲಿಸಲಾಗಿದೆ. ನಾವು ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ಕೊಲ್ಲಲಿದ್ದೇವೆ ಎಂದು ಮೇಲ್‍ನಲ್ಲಿ ಬರೆಯಲಾಗಿದೆ. ಈ ಹಿಂದೆ ಕೂಡ ಗೌತಮ್ ಗಂಭೀರ್ ಗೆ ಇದೇ ರೀತಿ ಬೆದರಿಕೆ ಕರೆ ಬಂದಿದ್ದವು. ಆಗಲೂ ಭದ್ರತೆ ಒದಗಿಸಲಾಗಿತ್ತು.
ಕಟ್ಟಾ ರಾಷ್ಟ್ರೀಯವಾದಿಯಾದ 40 ವರ್ಷ ವಯಸ್ಸಿನ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ಬಗ್ಗೆ ತೀವ್ರವಾಗಿ ಖಂಡಿಸಿದ್ದರು. ಜೊತೆಗೆ ಭಯೋತ್ಪಾದನೆ ನಿಯಂತ್ರಣಗೊಳ್ಳುವವರೆಗೂ ಪಾಕ್‍ನೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ತಿಳಿಸಿದ್ದರು.