Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿ.ಹೆಚ್.ತಿಪ್ಪಾರೆಡ್ಡಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಿ : ಜಗದೀಶ್ ಬಾಯಿ ಮಕ್ವಾನ್ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.15) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿರುವ 284 ಬೂತ್‍ನಲ್ಲಿ ಗೆದ್ದರೆ ವಿಧಾನಸಭೆ ಚುನಾವಣೆ ಗೆದ್ದಂತೆ ಎಂದು ಗುಜರಾತ್ ವಿಧಾನಸಭೆ ಮುಖ್ಯ ಸಚೇತಕ ಜಗದೀಶ್‍ಬಾಯಿ ಮಕ್ವಾನ್ ಕಾರ್ಯಕರ್ತರಿಗೆ ಸೂಚಿಸಿದರು.

ಭಾರತೀಯ ಜನತಾಪಾರ್ಟಿ ಜಿಲ್ಲಾ ಚುನಾವಣಾ ಕಾರ್ಯಾಲಯಕ್ಕೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಆರು ಬಾರಿ ಶಾಸಕರಾಗಿ ಒಮ್ಮೆ ವಿಧಾನಪರಿಷತ್ ಸದಸ್ಯರಾಗಿ ಚುನಾವಣೆಯಲ್ಲಿ ಗೆದ್ದಿರುವ ಹಿರಿಯ ಅನುಭವಿ ರಾಜಕಾರಣಿ ಜಿ.ಹೆಚ್.ತಿಪ್ಪಾರೆಡ್ಡಿ ಯವರನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕು.

ಕೇಂದ್ರ ಹಾಗೂ ರಾಜ್ಯ ಸರ್ಕಾರದಸ ಜನಪ್ರಿಯ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ನರೇಂದ್ರಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ. ಜಗತ್ತಿನಲ್ಲಿಯೆ ಅತಿ ದೊಡ್ಡ ಪಕ್ಷ. ಗಾಂಧಿ ನಾಡಿನಲ್ಲಿ ಹುಟ್ಟಿದವನು ನಾನು. ಬೇರೆ ಪಕ್ಷಗಳಿಗಿಂತ ನಮ್ಮ ಪಕ್ಷದ ಕಾರ್ಯಕರ್ತರು ವಿಭಿನ್ನವಾಗಿದ್ದಾರೆ. ಸಂಘಟನೆ ಅಡಿಯಲ್ಲಿ ಕೆಲಸ ಮಾಡುವವರು ನಮ್ಮ ಕಾರ್ಯಕರ್ತರು. ಪ್ರತಿಯೊಬ್ಬ ಕಾರ್ಯಕರ್ತನು ನಾನೆ ಅಭ್ಯರ್ಥಿಯೆಂದು ತಿಳಿದು ಜಿ.ಹೆಚ್.ತಿಪ್ಪಾರೆಡ್ಡಿರವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಮನವಿ ಮಾಡಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ.ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿದರೆ ಒಂದಲ್ಲ ಒಂದು ದಿನ ಅಧಿಕಾರ ಸಿಗುತ್ತದೆ ಎನ್ನವುದಕ್ಕೆ ಗುಜರಾತ್‍ನಲ್ಲಿ ಜಗದೀಶ್‍ಬಾಯಿ ಮಕ್ವಾನ ವಿಧಾನಸಭೆ ಮುಖ್ಯ ಸಚೇತಕರಾಗಿರುವುದೇ ಸಾಕ್ಷಿ.

ನರೇಂದ್ರಮೋದಿ ಎರಡನೆ ಬಾರಿಗೆ ಭಾರತದ ಪ್ರಧಾನಿಯಾದ ಮೇಲೆ ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ನಿಷೇಧಿಸಿರುವುದು ಸೇರಿದಂತೆ ಅನೇಕ ದಿಟ್ಟ ಕ್ರಮಗಳನ್ನು ಕೈಗೊಂಡಿದ್ದಾರೆ. ಕೊರೋನಾದಂತ ಸಂಕಷ್ಟ ಸಂದರ್ಭದಲ್ಲಿ ದೇಶದ 83 ಕೋಟಿ ಜನರಿಗೆ ಪ್ರಧಾನಿ ಮೋದಿ ಉಚಿತವಾಗಿ ಅಕ್ಕಿ, ಗೋಧಿ, ರಾಗಿ ನೀಡಿದ್ದಾರೆ.

ಶ್ರೀಲಂಕಾ ಹಾಗೂ ಪಾಕಿಸ್ತಾನದಲ್ಲಿ ಆಹಾರಕ್ಕೆ ಪರದಾಡುವಂತಾಗಿದೆ. ರಷ್ಯ-ಉಕ್ರೇನ್ ಯುದ್ದದಲ್ಲಿ ನಮ್ಮ ದೇಶದ 24 ಸಾವಿರ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದಿರುವ ಪ್ರಧಾನಿ ಮೋದಿರವರ ತಾಕತ್ತು ಎಂತಹುದು ಎನ್ನುವುದು ಇಡಿ ಜಗತ್ತಿಗೆ ಗೊತ್ತಾಗಿದೆ. ಕೇವಲ ಭಾರತದ ವಿದ್ಯಾರ್ಥಿಗಳಷ್ಠೆ ಅಲ್ಲ ಪಾಕಿಸ್ತಾನ ಮತ್ತು ಚೀನಾ ವಿದ್ಯಾರ್ಥಿಗಳನ್ನು ರಕ್ಷಿಸಿ ಅವರ ದೇಶಗಳಿಗೆ ಕಳಿಸಿದ್ದಾರೆಂದು ಹೇಳಿದರು.

ರೈತರು, ಕೂಲಿ ಕಾರ್ಮಿಕರು, ನೇಕಾರರು, ಚಾಲಕರ ಮಕ್ಕಳ ಶಿಕ್ಷಣಕ್ಕೆ ನಮ್ಮ ಸರ್ಕಾರ ಆರ್ಥಿಕ ನೆರವು ಘೋಷಿಸಿದೆ. ಸದಾಶಿವ ಆಯೋಗದ ವರದಿ ಜಾರಿಗೆ ತಂದಿದೆ. ಒಕ್ಕಲಿಗರಿಗೆ ಹಾಗೂ ಲಿಂಗಾಯಿತರಿಗೆ ತಲಾ ಎರಡರಷ್ಟು ಮೀಸಲಾತಿಯನ್ನು ನೀಡಿರುವುದು ರಾಜ್ಯದ ಮುಖ್ಯಮಂತ್ರಿಯ ಐತಿಹಾಸಿಕ ತೀರ್ಮಾನ. ಎಲ್ಲಾ ಜನಾಂಗಕ್ಕೂ ಸಾಮಾಜಿಕ ನ್ಯಾಯ ಸಿಗುವುದು ಬಿಜೆಪಿ.ಯಿಂದ ಮಾತ್ರ ಸಾಧ್ಯ ಎಂದು ಶ್ಲಾಘಿಸಿದರು.

ಭಾರತ ಬಲಿಷ್ಠ ಹಾಗೂ ಅಭಿವೃದ್ದಿಯಾಗಬೇಕೆಂಬುದು ಪ್ರಧಾನಿ ಮೋದಿರವರ ಕನಸು. ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಿ ಮೋದಿರವರನ್ನು ಚಿತ್ರದುರ್ಗಕ್ಕೆ ಕರೆಸುವಂತೆ ಜಿ.ಹೆಚ್.ತಿಪ್ಪಾರೆಡ್ಡಿ ಜಗದೀಶ್ ಬಾಯಿ ಮಕ್ವಾನ್‍ರವರಲ್ಲಿ ವಿನಂತಿಸಿದರು.

ಈಗ ಬಂದು ಚಿತ್ರದುರ್ಗದಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿ ಕೊರೋನಾ ಸಂದರ್ಭದಲ್ಲಿ ಎಲ್ಲಿ ಹೋಗಿದ್ದಪ್ಪ ಎಂದು ಹೆಸರೇಳದೆ ತಮ್ಮ ಎದುರಾಳಿ ವಿರುದ್ದ ವಾಗ್ದಾಳಿ ನಡೆಸಿದ ಜಿ.ಹೆಚ್.ತಿಪ್ಪಾರೆಡ್ಡಿ ಮುಂದಿನ ತಿಂಗಳು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಐವತ್ತು ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಕೋರಿದರು.

ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಚುನಾವಣೆ ಸಂಚಾಲಕ ಸಂಪತ್‍ಕುಮಾರ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಜಿಲ್ಲಾ ಕಾರ್ಯದರ್ಶಿ ಎ.ರೇಖ, ವಕ್ತಾರ ನಾಗರಾಜ್ ಬೇದ್ರೆ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಸದಸ್ಯರುಗಳಾದ ಹರೀಶ್, ಶ್ರೀನಿವಾಸ್ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!