ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 05 : ನಗರಸಭೆ ನೌಕರ ಹಾಗೂ ಪೌರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಗೋಪಾಲಕೃಷ್ಣ (55) ಗುರುವಾರ ನಿಧನರಾದರು.
ಹೃದಯಸಂಬಂಧಿ ರೋಗದಿಂದ ಇತ್ತೀಚೆಗೆ ಚೇತರಿಸಿಕೊಂಡಿದ್ದ ಅವರು, ಬುಧವಾರ ರಾತ್ರಿ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಕರುವಿನಕಟ್ಟೆ ವೃತ್ತದ ಸಮೀಪದ ನಿವಾಸಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ.