ಅಹಮದಬಾದ್: ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ, ಎಎಪಿ ಭರ್ಜರಿ ತಯಾರಿಯಲ್ಲಿದೆ. ಇದೀಗ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಗುಜರಾತ್ ಕಾಂಗ್ರೆಸ್ ಉಸ್ತುವಾರಿ ಅಶೋಕ್ ಗೆಹ್ಲೋಟ್ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಜನರಿಗೆ ನಾನಾ ಭರವಸೆಗಳನ್ನು ನೀಡಿದೆ.
ಅದರಲ್ಲಿ ಮೊದಲನೆಯದಾಗಿ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಅನ್ನು ಸರ್ದಾರ್ ವಲ್ಲಭ ಬಾಯಿ ಪಟೇಲ್ ಸ್ಟೇಡಿಯಂ ಆಗಿ ಮರುನಾಮಕರಣ ಮಾಡುವುದಾಗಿ ತಿಳಿಸಿದೆ. ಇನ್ನು 10 ಲಕ್ಷ ಯುವಕರಿಗೆ ಉದ್ಯೋಗದ ಭರವಸೆಯನ್ನು ನೀಡಿದ್ದಾರೆ. 300 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಭರವಸೆ ನೀಡಿದೆ.
ಗುಜರಾತ್ ರೈತರ ಮೂರು ಲಕ್ಷದವರೆಗಿನ ಸಾಲಮನ್ನಾ ಮಾಡಲಾಗಿದೆ. ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೆ.50ರಷ್ಟು ಮೀಸಲಾತಿ. ಆಂಗ್ಲ ಮಾಧ್ಯಮ ಶಾಲೆಗಳು ಆರಂಭ. 10 ಲಕ್ಷದವರೆಗೂ ಉಚಿತ ಚಿಕಿತ್ಸೆ. ಅಂಗವಿಕಲ, ವಿಧವೆ, ನಿರ್ಗತಿಕ ಮಹಿಳೆಯರಿಗೆ ಮಾಸಿಕ ಎರಡು ಸಾವಿರ. ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್, ರೈತರಿಗೆ 10 ಗಂಟೆ ವಿದ್ಯುತ್ ಉಚಿತವಾಗಿ ಸಿಗಲಿದೆ. ಹೀಗೆ ಅನೇಕ ಭರವಸೆಗಳನ್ನು ಕಾಂಗ್ರೆಸ್ ನೀಡಿದೆ.