ಚಿತ್ರದುರ್ಗ, (ಫೆ.01) : ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ ಹತ್ತನೇ ತರಗತಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಮೊದಲ ಸ್ಥಾನ ಪಡೆಯಬೇಕೆಂದರೆ ನಿಮ್ಮ ಪರಿಶ್ರಮ ತುಂಬಾ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳದ ತಿಪ್ಪೇಸ್ವಾಮಿ ಹೇಳಿದರು.
ನಗರದ ಹೊರವಲಯದಲ್ಲಿರುವ ಬಾಪೂಜಿ ಸಮನ್ವಯ ಪ್ರೌಢಶಾಲೆ ಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳದ ಕೆ. ಎಂ. ವೀರೇಶ್ ಅವರು ಮಾತನಾಡುತ್ತ ವಿದ್ಯಾರ್ಥಿಗಳಿಗೆ ಏಕಾಗ್ರತೆ ಮುಖ್ಯ ಏಕಾಗ್ರತೆಯಿಂದ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾದ ಆಂಗ್ಲ ಭಾಷಾ ವಿಷಯ ಪರಿವೀಕ್ಷಕರಾದ ಚಂದ್ರಣ್ಣ ಅವರು ಆಂಗ್ಲ ಭಾಷೆ ತುಂಬಾ ಸುಲಭವಾದ ಭಾಷೆ ಯಾವುದೇ ಭಯ ಇಲ್ಲದೆ ಪರೀಕ್ಷೆಯನ್ನು ಎದುರಿಸಿ ಎನ್ನುವ ಆತ್ಮವಿಶ್ವಾಸವನ್ನು ತುಂಬಿದರು.
ಕಾರ್ಯಕ್ರಮದಲ್ಲಿ ಇನಾಯತ್, ಶಿಕ್ಷಣ ಸಂಯೋಜಕರು, ಬಾಪೂಜಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಎಂಟು ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಗಳಾಗಿ ರುಖಿಯ ಖಾನಮ್ ಭಾಗವಹಿಸಿದ್ದರು.