Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ : ಸಚಿವ ಶ್ರೀರಾಮುಲು

Facebook
Twitter
Telegram
WhatsApp

ಚಿತ್ರದುರ್ಗ,(ಏ.30) : ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ನಾಲ್ಕು ವರ್ಷಗಳಲ್ಲಿ ರೂ.2100 ಕೋಟಿಗಳ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಾಯಕನಹಟ್ಟಿ ಪಟ್ಟಣದಲ್ಲಿ ಶನಿವಾರ(ಏ.30) ನಾಯಕನಹಟ್ಟಿ ಹಾಗೂ ತಳಕು ಹೋಬಳಿಯ ವ್ಯಾಪ್ತಿಯಲ್ಲಿ ರೂ.68 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

52 ವರ್ಷಗಳ ಹಿಂದೆ ನಿಜಲಿಂಗಪ್ಪನವರು ಈ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಆಗಿದ್ದಾರೆ. ನಾಯಕನಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಪ್ರೇರಣೆಯಿಂದ ನಾನು ಈ ಕ್ಷೇತ್ರದಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದ ಹಿನ್ನಡೆಗೆ ಈ‌ ಹಿಂದೆ ಆಡಳಿತ ನೆಡಿಸಿದ ಪಕ್ಷಗಳೇ ಹೊಣೆ. ಭದ್ರಾ ಮೇಲ್ದಂಡೆ ಯೋಜನೆಯಡಿ 79 ಕೆರೆಗಳಿಗೆ ನೀರು ತುಂಬಿಸಲಾಗುವುದು. ಕ್ಷೇತ್ರದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಣೆ ಮಾಡಲಾಗಿದೆ.

ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರೂ.2100 ಕೋಟಿಗಳ ಅನುದಾನ ಸರ್ಕಾರದಿಂದ ತರಲಾಗಿದೆ. ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಇನ್ನೂ ಹೆಚ್ಚಿನ ಅನುದಾನ ತರಲಾಗುವುದು. ಕ್ಷೇತ್ರದ ಬಡವರಿಗೆ ಮನೆ ರಸ್ತೆಗಳನ್ನು ನಿರ್ಮಿಸಿದ್ದೇವೆ. ಕಳೆದ ವಿಧಾನ ಸಭಾ ಅವಧಿ ಹಾಗೂ ಈಗಿನ ವಿಧಾನ ಸಭಾ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕರು ತುಲನೆ ಮಾಡಿ ನೋಡಬೇಕು.

ಪರಿಶಿಷ್ಟ ವರ್ಗಗಳ ಇಲಾಖೆಯ ‌28 ಸಾವಿರ ಕೋಟಿ ರೂಪಾಯಿ ಅನುದಾನದಲ್ಲಿ ರಾಜ್ಯಾದ್ಯಂತ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ವಾಣಿವಿಲಾಸ ಅಣೆಕಟ್ಟೆಯಿಂದ ವೇದವಾತಿ ನದಿಗೆ ನೀರು ಅರಿಸಲಾಗಿದೆ. ಇದರಿಂದ ಕ್ಷೇತ್ರದ ಅಂರ್ತಜಲ ಮಟ್ಟ ಹೆಚ್ಚಿ ಬೋರವೆಲ್‌ಗಳು ಮರುಪೂರಣಗೊಂಡಿವೆ.

ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರಾವರಿ ಆದ್ಯತೆ ನೀಡಲಾಗಿದೆ. ತುಂಗಾಭ್ರದ್ರ ನದಿ ಹಿನ್ನೀರಿನ ಮೂಲಕ ಕ್ಷೇತ್ರದ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ಮೊಳಕಾಲ್ಮೂರು ಪಟ್ಟಣದಲ್ಲಿ ರೂ. 3.5 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲಾಗುವುದು. ನಾಯಕನಹಟ್ಟಿ ಪಟ್ಟಣಕ್ಕೆ ಅಲೆಮಾರಿ ಮತ್ತು ಅರೆಅಲೆಮಾರಿ ಕೋಟಾದಡಿ 200 ಮನೆಗಳು ಮಂಜೂರು ಮಾಡಲಾಗಿದೆ. ನೇರ ಸಾಲ ವಿತರಣೆಯಲ್ಲಿ ಭ್ರಷ್ಟಾಚಾರ ಮಾಡಿದ ಅಧಿಕಾರಿಗಳನ್ನು ಅಮಾನತು ಹಾಗೂ ವರ್ಗಾವಣೆ ಮಾಡಲಾಗಿದೆ ಎಂದರು.

ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಪ್ರಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ದಾಖಲೆ ಪ್ರಕಾರ ಮೊಳಕಾಲ್ಮೂರು ಕ್ಷೇತ್ರಕ್ಕೆ ಕಳೆದ ನಾಲ್ಕು ವರ್ಷಗಳಲ್ಲಿ ರೂ. 2164 ಕೋಟಿ ಅನುದಾನ ಬಿಡುಗಡೆಯಾಗಿದೆ. ಗುಣಮಟ್ಟದ ರಸ್ತೆ, ಕುಡಿಯುವ ನೀರು, ಶಾಲೆ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳನ್ನು ಸಾರ್ವಜನಿಕರಿಗೆ ಕಲ್ಪಿಸಲಾಗಿದೆ. ಅತಿವೃಷ್ಠಿಯಿಂದ 72 ಶಾಲೆಗಳು ಹಾನಿಗೆ ಒಳಗಾಗಿದ್ದವು. ಶಾಲಾ ದುರಸ್ಥಿಗೆ ಈ ಎಲ್ಲ ಶಾಲೆಗಳನ್ನು ಒಳಗೊಂಡಂತೆ ಕ್ರಿಯಾಯೋಜನೆ ತಯಾರಿಸಲಾಗಿದ್ದು, 32 ಶಾಲೆಗಳು ದುರಸ್ತಿ ಹಂತದಲ್ಲಿವೆ ಎಂದರು.

ಕ್ಷೇತ್ರ ವ್ಯಾಪ್ತಿಯ ದೊಡ್ಡ ಉಳ್ಳಾರ್ತಿ, ಓಬಳಪುರ ಗ್ರಾಮಗಳಲ್ಲಿ ಗುಣಮಟ್ಟದ ಶಿಕ್ಷಣದ ಅರಿತು ಸಚಿವ ಶ್ರೀರಾಮುಲು ಉದ್ಯಮಿಗಳ ಮನವೊಲಿಸಿ ಶಾಲೆ ನಿರ್ಮಾಣಕ್ಕೆ ರೂ. 1 ಕೋಟಿ 20 ಲಕ್ಷ ವೆಚ್ಚದಲ್ಲಿ ಹೈಟೆಕ್ ಶಾಲೆ, ಸ್ಮಾರ್ಟ್ ಕ್ಲಾಸ್, ಶೌಚಾಲಯ ನಿರ್ಮಾಣ ಸೇರಿದಂತೆ ಮಾದರಿ ಶಾಲೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

ಪದವಿ, ಸ್ನಾತಕೋತ್ತರ ಪದವಿ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ ರೂ. 32 ಲಕ್ಷ ವ್ಯಯ ಮಾಡಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನೀಡಲು ಕ್ರಮಕೈಗೊಂಡಿದ್ದಾರೆ. ಇದರಿಂದ ಜಿಲ್ಲೆಯ 32,000 ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕಿನ 32 ಗ್ರಾಮಗಳನ್ನು ಈಗಾಗಲೇ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಲಾಗಿದೆ. ಒಂದು ವರ್ಷದೊಳಗೆ ಚಳ್ಳಕೆರೆ ತಾಲ್ಲೂಕಿನ ಎಲ್ಲ ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದರು.

ಸಚಿವ ಶ್ರೀರಾಮುಲು ಅವರು ನಾಯಕನಹಟ್ಟಿ ಪಟ್ಟಣದ ಒಳಮಠದ ಬಳಿ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನದ ರೂ. 6 ಕೋಟಿ ವೆಚ್ಚದಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಹಾಗೂ ವಾರ್ಡ್ ನಂಬರ್ 2,5,7 ಮತ್ತು‌14 ಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣ ಹಾಗೂ ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಮಾದಣ್ಣ, ಜಿ.ಪಂ.ಮಾಜಿ ಸದಸ್ಯ ಜಯಪಾಲಯ್ಯ ಮುಖಂಡರಾದ ಎ.ಮುರುಳಿ,ರಾಮರೆಡ್ಡಿ, ಮಂಜುನಾಥ, ಶ್ರೀನಿವಾಸ, ಶಿವಣ್ಣ, ಪಾಪೇಶ ನಾಯ್ಕ್, ಸಿ.ಟಿ.ಮೋಹನ್, ಬೊರಸ್ವಾಮಿ ಮತ್ತಿತರು ಉಪಸ್ಥಿತರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಮಾಣ ಸಮಾರಂಭ : ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್ ಅವರಿಂದ ಉದ್ಘಾಟನೆ  

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಉನ್ನತ ಶಿಕ್ಷಣ ಜಾಗತಿಕ ಮಟ್ಟದಲ್ಲಿ ಬದಲಾವಣೆಯಾಗುತ್ತಿರುವುದರಿಂದ ತಂತ್ರಜ್ಞಾನದ ಬಗ್ಗೆ ಜ್ಞಾನ ಬೆಳೆಸಿಕೊಂಡರೆ

ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿ : ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ ತಂಡ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಹರಿಹರದಲ್ಲಿ ನವೆಂಬರ್ 23 ಮತ್ತು 24 ರಂದು ನಡೆದ ಅಂತರ್ ಜಿಲ್ಲಾ

ಚಳ್ಳಕೆರೆ | ಕಾರು ಪಲ್ಟಿ ಮಗು ಸಾವು : ಇಬ್ಬರಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 25 : ವಿವಾಹ ಸಮಾರಂಭಕ್ಕೆ ಹೋಗಿ ವಾಪಸ್ ಬರುತ್ತಿರುವ ವೇಳೆ ಕಾರೊಂದು ಪಲ್ಟಿಯಾಗಿ ಮಗು

error: Content is protected !!